ಮಂಗಳೂರು ಮಹಾನಗರ ಪಾಲಿಕೆ: ಇಂದು ಬಜೆಟ್ ವಿಶೇಷ ಸಭೆ

ಮಂಗಳೂರು,ಜ.28, 2022: ಮಂಗಳೂರು ಮಹಾನಗರ ಪಾಲಿಕೆಯ ಪರಿಷತ್ತಿನ ಬಜೆಟ್ ವಿಶೇಷ ಸಭೆ ಜ.28 ಮಧ್ಯಾಹ್ನ 3 ಗಂಟೆಗೆ ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಾಲಿಕೆಯ ಪರಿಷತ್ತು ಸಾಮಾನ್ಯ ಸಭೆ ಇದೇ ಜ.31ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಹಾನಗರಪಾಲಿಕೆಯ ಪರಿಷತ್ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.