ಕೋವಿಡ್ 19 ಲಸಿಕೆ : ಜಿಲ್ಲೆಯಲ್ಲಿ ಒಂದು ವಾರದಲ್ಲಿ 100% ಸಾಧನೆ ಗುರಿ

 ಕೋವಿಡ್ 19 ಲಸಿಕೆ : ಜಿಲ್ಲೆಯಲ್ಲಿ ಒಂದು ವಾರದಲ್ಲಿ 100% ಸಾಧನೆ ಗುರಿ
Share this post

ವಿಶೇಷ ಲೇಖನ

ಉಡುಪಿ ಜಿಲ್ಲೆಯಲ್ಲಿ ಕೋವಿಡ್ 19 ಲಸಿಕೆ ನೀಡುವಲ್ಲಿ ಪ್ರಥಮ ಡೋಸ್ 98.55 % ಹಾಗೂ ಎರಡನೇ ಡೋಸ್ 87.22 ಸಾಧನೆ ಆಗಿದ್ದು, ಒಂದು ವಾರದ ಅವಧಿಯಲ್ಲಿ ಎರಡೂ ವಿಭಾಗದಲ್ಲಿ 100% ಲಸಿಕೆ ನೀಡಲು ಯೋಜನೆ ರೂಪಿಸಲಾಗಿದೆ.

ಇದಕ್ಕಾಗಿ ಫೆಬ್ರವರಿ 2 ರ ಬುಧವಾರ ಮತ್ತು 4 ರ ಶುಕ್ರವಾರ ಕೋವಿಡ್ ಲಸಿಕಾ ಪ್ರಗತಿ ಹೆಚ್ಚಿಸಲು ವಿಶೇಷ ಲಸಿಕಾ ಅಭಿಯಾನ ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಮತ್ತು ನಗರ ವ್ಯಾಪ್ತಿಯಲ್ಲಿ ಪ್ರಥಮ ಡೋಸ್ ಕೋವಿಡ್ ಲಸಿಕೆ ಪಡೆಯದವರನ್ನು ಮತ್ತು ಪ್ರಥಮ ಡೋಸ್ ಕೋವಿಶೀಲ್ಡ್ ಪಡೆದು 84 ದಿನ ದಾಟಿದವರಲ್ಲಿ ಮತ್ತು ಪ್ರಥಮ ಡೋಸ್ ಕೋವಾಕ್ಸಿನ್ ಲಸಿಕೆ ಪಡೆದು ಪಡೆದು 28 ದಿನ ದಾಟಿದವರಲ್ಲಿ 2ನೇ ಡೋಸ್ ಪಡೆಯದವರಿಗೆ ಹಾಗೂ 60 ವರ್ಷ ಮೇಲ್ಪಟ್ಟವರು, ಮುಂಚೂಣಿ ಕಾರ್ಯಕರ್ತರು ಮತ್ತು ಆರೋಗ್ಯ ಕಾರ್ಯಕರ್ತಯರು 2ನೇ ಡೋಸ್ ಲಸಿಕೆ ಪಡೆದು 9 ತಿಂಗಳು ದಾಟಿದವರಿಗೆ ಮುನ್ನೆಚ್ಚರಿಕೆ ಡೋಸ್ ನೀಡಲಾಗುತ್ತದೆ.

ಜಿಲ್ಲೆಯಲ್ಲಿ ಒಂದು ವಾರದ ಅವಧಿಯಲ್ಲಿ ಪ್ರಥಮ ಮತ್ತು ಎರಡನೇ ಡೋವಿ ಕೋವಿಡ್ ಲಸಿಕಾಕರಣ ವಿಭಾಗದಲ್ಲಿ ಶೇಕಡಾ 100 ಸಾಧನೆ ಮಾಡಲು , ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಾಗೂ ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಾರ್ಡ್ ವಾರು ನೋಡೆಲ್ ಅಧಿಕಾರಿಗಳನ್ನಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಅಧಿಕಾರಿಗಳನ್ನು ನಿಯೋಜಿಸಿದೆ. ಈ ಕಾರ್ಯಕ್ಕೆ ನಿಯೋಜಿಸಿದ ಅಧಿಕಾರಿಗಳು ಸಂಬAಧಪಟ್ಟ ಆರೋಗ್ಯ ಸಂಸ್ಥೆಗಳಿಗೆ ಮತ್ತು ಆರೋಗ್ಯ ಸಂಸ್ಥೆಗಳಿಗೆ ಸಂಬಂಧಿಸಿದ ಪಂಚಾಯತ್ / ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ , ಮೇಲ್ವಿಚಾರಣೆ ಮಾಡಿ , ವೈದ್ಯಾಧಿಕಾರಿಗಳಿಗೆ ಮತ್ತು ಲಸಿಕಾ ತಂಡಕ್ಕೆ ಮತ್ತು ಪಂಚಾಯತ್ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿ ಕೋವಿಡ್ ಲಸೀಕಾಕರಣದಲ್ಲಿ 100% ಪಗತಿ ಸಾಧಿಸಲು ಸಹಕರಿಸುವಂತೆ ಸೂಚನೆಗಳನ್ನು ನೀಡಲಾಗಿದೆ.

ಈ ಕಾರ್ಯಕ್ಕೆ ನಿಯೋಜಿಸಿರುವ ಮೇಲ್ವಿಚಾರಣಾ ಅಧಿಕಾರಿಗಳು, ಗ್ರಾಮ ಪಂಚಾಯತ್ ಮತ್ತು ನಗರ ವ್ಯಾಪ್ತಿಯಲ್ಲಿ 60 ವರ್ಷ ಮೇಲ್ಪಟ್ಟವರು, ಮುಂಚೂಣಿ ಕಾರ್ಯಕರ್ತರು ಮತ್ತು ಆರೋಗ್ಯ ಕಾರ್ಯಕರ್ತೆಯರು 2ನೇ ಡೋಸ್ ಕೋವಿಡ್ ಲಸಿಕೆ ಪಡೆದು 9 ತಿಂಗಳು ದಾಟಿದವರು ಮುನ್ನೆಚ್ಚರಿಕೆ ಡೋಸ್ ಕೋವಿಡ್ ಲಸಿಕೆಯನ್ನು ಪಡೆಯಲು ಅರ್ಹರಿರುತ್ತಾರೆ. ಇಂತಹ ಅರ್ಹ ಫಲಾನುಭವಿಗಳನ್ನು ಲಸಿಕೆ ಪಡೆಯಲು ಪ್ರೇರೇಪಿಸಿ ಹತ್ತಿರದ ಲಸಿಕಾ ಕೇಂದ್ರದಲ್ಲಿ ಲಸಿಕೆ ಪಡೆಯುವ ಬಗ್ಗೆ ಆರೋಗ್ಯ ಸಂಸ್ಥೆಯ ವೈದ್ಯಾಧಿಕಾರಿಯವರು ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿ ಪರಿಶೀಲಿಸುವುದು ಮತ್ತು ಸಿಬ್ಬಂದಿಯವರು ಮುಂಜಾಗ್ರತಾ ಡೋಸ್ ಲಸಿಕೆಯನ್ನು ಕೂಡಲೇ ಪಡೆದುಕೊಳ್ಳುವಂತೆ ಸೂಚಿಸಲಿದ್ದಾರೆ.

ಗ್ರಾಮ ಪಂಚಾಯತ್ ಮತ್ತು ನಗರ ವ್ಯಾಪ್ತಿಯಲ್ಲಿ 18 ವರ್ಷ ಮೇಲ್ಪಟ್ಟವರಲ್ಲಿ 1ನೇ ಡೋಸ್ ಕೋವಿಡ್ ಲಸಿಕೆ ಪಡೆಯಲು ಬಾಕಿ ಇರುವವರನ್ನು ಮತ್ತು 2ನೇ ಡೋಸ್ ಕೋವಿಡ್ ಲಸಿಕೆ ಪಡೆಯಲು ಬಾಕಿ ಇರುವವರನ್ನು ಗುರುತಿಸಿ ಮನವೊಲಿಸಿ ಲಸಿಕೆ ಪಡೆಯಲು ಪ್ರೇರೇಪಿಸಿ ಲಸಿಕೆ ನೀಡಲು ಕ್ರಮವಹಿಸಬೇಕಾಗಿದ್ದು ಈ ಬಗ್ಗೆ ಲಸಿಕಾ ಕೇಂದ್ರ ಆಯೋಜಿಸಿದ ಬಗ್ಗೆ ಪರಿಶೀಲಿಸಿ ಲಸಿಕೆ ವಂಚಿತರನ್ನು ನಿರಾಕರಣೆ ಇರುವವರನ್ನು ಮನವೊಲಿಸುವಂತೆ ಸೂಚನೆ ನೀಡಲಾಗಿದೆ.

ಗ್ರಾಮ ಪಂಚಾಯತ್ ಮ್ತು ನಗರ ವ್ಯಾಪ್ತಿಯಲ್ಲಿ ಲಸಿಕೆ ಪಡೆಯಲು ಬಾಕಿ ಇರುವ 15 ರಿಂದ 18 ವರ್ಷದ ವಿದ್ಯಾರ್ಥಿಗಳು ಮತ್ತು ಅದೇ ವಯಸ್ಸಿನ ಶಾಲೆಗಳಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಗ್ರಾಮ/ನಗರ ಕಾರ್ಯಪಡೆ ಅಧ್ಯಕ್ಷರು ಮತ್ತು ಸದಸ್ಯರುಗಳ ಸಹಕಾರದಿಂದ ಲಸಿಕೆ ಪಡೆಯುವಂತೆ ಕ್ರಮವಹಿಸಬೇಕಾಗಿದ್ದು, ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.

ಮೊಬೈಲ್ ಲಸಿಕಾ ಶಿಬಿರಗಳ ಮೂಲಕ ನಡೆದಾಡಲು ಅಸಾಧ್ಯವಿರುವ (Bed Ridden) ಮತ್ತು ನಿರಾಕರಣೆ ಇರುವ ಮನೆಗಳಿಗೆ ತಂಡದೊಂದಿಗೆ ಹೋಗಿ ಮನವೊಲಿಸಿ, ಲಸಿಕೆ ನೀಡುವುದು. ಈ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಂದ ಆರೋಗ್ಯ ಇಲಾಖೆಗೆ ವಾಹನ ವ್ಯವಸ್ಥೆ ಮಾಡಲು ಸೂಚನೆ ನೀಡಿದೆ.

ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡುವ ಗುರಿ 9,99,000 ಆಗಿದ್ದು, ಇಂದಿನವರೆಗೆ 9,84,551 ಮಂದಿಗೆ ಪ್ರಥಮ ಡೋಸ್ ನೀಡಿದ್ದು, 98.55% ಗುರಿ ಸಾಧಿಸಿದೆ,ಎರಡನೇ ಡೋಸ್ 8,71,317 ಮಂದಿಗೆ ನೀಡಿದ್ದು, 87.22% ಸಾಧನೆ ಆಗಿದ್ದು, ಒಟ್ಟು 18,55,868 ಡೋಸ್ ಲಸಿಕೆ ನೀಡಲಾಗಿದೆ. 15-18 ವರ್ಷದೊಳಗಿನ ಗುರಿ 53,555, ಆಗಿದ್ದು, ಇದುವರೆಗೆ 47,185 ವಿದ್ಯಾರ್ಥಿಗಳಿಗೆ ನೀಡಿದ್ದು, 88.11% ಸಾಧನೆ ಆಗಿದೆ, 25797 ಮಂದಿಗೆ ಮುನ್ನೆಚ್ಚರಿಕಾ ಡೋಸ್ ನೀಡಲಾಗಿದೆ.

ಜಿಲ್ಲೆಯ ಅರ್ಹ ಎಲ್ಲರಿಗೂ ಕೋವಿಡ್-19 ಪ್ರಥಮ ಮತ್ತು 2 ನೇ ಡೋಸ್ ಲಸಿಕೆ ನೀಡಲು ಗ್ರಾಮ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿದೆ.ತೀವ್ರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಹಾಗೂ ಲಸಿಕೆ ಪಡೆಯಲು ನಿರಾಕರಣೆ ಇರುವವರ ಮನೆಗೆ ತೆರಳಿ ಮನವೊಲಿಸಿ ಲಸಿಕೆ ನೀಡಲು ಮೊಬೈಲ್ ತಂಡಗಳನ್ನು ರಚಿಸಲಾಗಿದೆ. ಜಿಲ್ಲೆಯಲ್ಲಿ 100% ಲಸಿಕಾಕರಣ ಪ್ರಗತಿ ಸಾಧಿಸಲು ವಿಶೇಷ ಲಸಿಕಾ ಶಿಬಿರಗಳನ್ನು ಆಯೋಜಿಸಲಾಗುತ್ತಿದ್ದು, ಒಂದು ವಾರದ ಅವಧಿಯಲ್ಲಿ ಅರ್ಹ ಎಲ್ಲರಿಗೂ 100% ಸಾಧನೆ ಮಾಡಲು ಗುರಿ ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!