ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ, ಸಾಂಸ್ಕೃತಿಕ ಸ್ಫರ್ಧೆ

 ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ, ಸಾಂಸ್ಕೃತಿಕ ಸ್ಫರ್ಧೆ
Share this post

ಉಡುಪಿ, ಫೆ 5, 2022: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಗಳು ಫೆಬ್ರವರಿ 8 ಮತ್ತು 9 ರಂದು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕ್ರೀಡಾಕೂಟವನ್ನು ಫೆಬ್ರವರಿ 8 ರಂದು ಬೆಳಗ್ಗೆ 10 ಗಂಟೆಗೆ ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಫೆಬ್ರವರಿ 9 ರಂದು ಸಂಜೆ 4 ಗಂಟೆಗೆ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದ್ದು, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ, ವಿಧಾನಪರಿಷತ್ ಶಾಸಕರಾದ ಆಯನೂರು ಮಂಜುನಾಥ್, ಎಸ್.ಎಲ್ ಭೋಜೆಗೌಡ, ಡಾ. ತೇಜಸ್ವಿನಿ ಗೌಡ, ಡಾ.ವಿ ಮಂಜುನಾಥ ಭಂಡಾರಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಭಾಗವಹಿಸಲಿರುವರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!