ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆ

 ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆ
Share this post

ಕಾರವಾರ ಫೆ. 14, 2022: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೆರವಿನೊಂದಿಗೆ ಕೆ-ಸ್ಟೆಪ್ಸ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಫೆ.17 ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯನ್ನು ಸಂಘಟಿಸುತ್ತಿದೆ.

ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸಿ ಈಗಾಗಲೇ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು.

ಪ್ರಥಮ ಬಹುಮಾನ ಪಡೆಯುವ ವಿದ್ಯಾರ್ಥಿಗೆ ರೂ.5000, ದ್ವಿತಿಯ ಬಹುಮಾನ ಪಡೆಯುವ ವಿದ್ಯಾರ್ಥಿಗೆ ರೂ. 3000ಗಳ ನಗದು ಬಹುಮಾನ ಹಾಗೂ ಅಭಿನಂದನಾ ಪತ್ರ ನೀಡಲಾಗುವುದು.

ಜಿಲ್ಲಾ ಹಂತದಲ್ಲಿ ನಗದು ಬಹುಮನದೊಂದಿಗೆ ಪ್ರಥಮ ಹಾಗೂ ದ್ವಿತಿಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಯುವ ವಿಜ್ಞಾನಿಗಳ ಸಮಾವೇಶದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತದೆ. ರಾಜ್ಯಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗುವ 4 ಯುವ ವಿಜ್ಞಾನಿಗಳಿಗೆ ತಲಾ ರೂ.10 ಸಾವಿರ ನಗದು ಬಹುಮಾನದೊಂದಿಗೆ ಸ್ಮರಣಿಕೆ ಮತ್ತು ಯುವ ವಿಜ್ಞಾನಿ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಗುತ್ತದೆ.

ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸ್ಪರ್ಧೆಯ ರಾಜ್ಯ ಸಂಯೋಜಕರಾದ ಮೀನಾಕ್ಷಿ ಶಿವಾನಂದ ಕುಡಸೋಮಣ್ಣವರ ಮೊಬೈಲ್ ಸಂಖ್ಯೆ 7353960666 ಅಥವಾ ಕರಾವಿಪ ಕಚೇರಿ ಮೊಬೈಲ್ ಸಂಖ್ಯೆ 9483549159 ಗೆ ಸಂಪರ್ಕಿಸಬಹುದೆಂದು ವಿಜ್ಞಾನ ಪರಿಷತ್ತಿನ ಗೌರವ ಕಾರ್ಯದರ್ಶಿ ಸಿ. ಕೃಷ್ಣೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!