ಜಿಲ್ಲೆಯಲ್ಲಿ ಲೋಕೋಪಯೋಗಿ ಸಚಿವರ ಪ್ರವಾಸ

 ಜಿಲ್ಲೆಯಲ್ಲಿ ಲೋಕೋಪಯೋಗಿ ಸಚಿವರ ಪ್ರವಾಸ
Share this post

ಉಡುಪಿ, ಫೆ 17, 2022: ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ್ ಫೆಬ್ರವರಿ 18 ಮತ್ತು 19 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಫೆ. 18 ರಂದು ರಾತ್ರಿ 10 ಗಂಟೆಗೆ ಉಡುಪಿಗೆ ಆಗಮಿಸಿ, ವಾಸ್ತವ್ಯ ಮಾಡಲಿದ್ದಾರೆ. ಫೆ. 19 ರಂದು ಬೆಳಗ್ಗೆ 10.30 ಕ್ಕೆ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ನ್ಯಾಯಾಲಯ ಕಟ್ಟಡದ 3 ನೇ ಮಹಡಿಯ ಮತ್ತು ನೂತನವಾಗಿ ಸೃಜಿಸಲ್ಪಟ್ಟ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಉದ್ಘಾಟನಾ ಸಮಾರಂಭದಲ್ಲಿ  ಭಾಗವಹಿಸಿ, ನಂತರ ಗದಗ ಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!