ಚೆಕ್ಪೋಸ್ಟ್ ಗಳಲ್ಲಿ ತಪಾಸಣೆ ಮುಂದುವರಿಕೆ: ಜಿಲ್ಲಾಧಿಕಾರಿ ಆದೇಶ
ಮಂಗಳೂರು,ಫೆ.17, 2022: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಕಣ್ಗಾವಲು, ನಿಯಂತ್ರಣ ಮತ್ತು ಜಾಗರೂಕತೆ ಮಾರ್ಗಸೂಚಿಗಳನ್ನು ಕಾಲಕಾಲಕ್ಕೆ ಜಾರಿಗೊಳಿಸುತ್ತಿದೆ.
ಪ್ರಕರಣಗಳ ಹೊರೆಯನ್ನು ಇನ್ನಷ್ಟು ಕಡಿಮೆ ಮಾಡಲು ಪರೀಕ್ಷೆ-ಪತ್ತೆ-ಚಿಕಿತ್ಸೆ-ಲಸಿಕಾಕರಣ ಮತ್ತು ಕೋವಿಡ್-19ರ ನಿಯಮಗಳನ್ನು ಅನುಸರಿಸುವುದು ಮೊದಲಾದ ಐದು ಕಾರ್ಯತಂತ್ರಗಳನ್ನು ಮುಂದುವರಿಸಲಾಗುತ್ತಿದೆ ಹಾಗೂ 2022ರ ಫೆ.28ರ ವರೆಗೆ ಅನ್ವಯವಾಗುವಂತೆ ಕೇರಳದಿಂದ ದಕ್ಷಿಣ ಕನ್ನಡ ಜಿಲೆಗೆ ಪ್ರವೇಶವಿರುವ ಗಡಿಭಾಗಗಳಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಚೆಕ್ಪೋಸ್ಟ್ಗಳಲ್ಲಿ ತಪಾಸಣೆ ಕಾರ್ಯವನ್ನು ಮುಂದುವರಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ, ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.
ಈ ಆದೇಶವನ್ನು ಉಲ್ಲಂಘಿಸಿದ್ದಲ್ಲೀ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51-60ರ ಅನ್ವಯ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ-2020ರ ಕಲಂ 4,5 ಹಾಗೂ 10 ರಂತೆ ಕಾನೂನು ಕ್ರಮಗಳ ಜತೆಗೆ ಇತರೆ ಕಾನೂನು ನಿಬಂಧನೆಗಳ ಅನ್ವಯ ಕ್ರಮಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.