ಪ್ರೌಢಶಾಲಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

 ಪ್ರೌಢಶಾಲಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
Share this post

ಉಡುಪಿ, ಫೆ 19, 2022: ಜಿಲ್ಲೆಯಲ್ಲಿ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು, ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪ್ರೌಢಶಾಲೆಗಳ ಸುತ್ತ ಮುತ್ತಲಿನ 200 ಮೀ. ಪ್ರದೇಶದಲ್ಲಿ ಫೆಬ್ರವರಿ 21 ರ ಬೆಳಗ್ಗೆ 6 ಗಂಟೆಯಿಂದ ಫೆ. 28 ರ ಸಂಜೆ 6 ಗಂಟೆಯವರೆಗೆ ದಂಡ ಪ್ರಕ್ರಿಯೆ ಸಂಹಿತೆ 1973 ರ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ.    

ಈ ಅವಧಿಯಲ್ಲಿ ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ ಐದು ಮತ್ತು ಐದಕ್ಕಿಂತ  ಹೆಚ್ಚು ಜನರು ಗುಂಪಾಗಿ ಸೇರುವುದು, ಯಾವುದೇ ವ್ಯಕ್ತಿಯ ಜಾತಿ, ಧರ್ಮ, ಕೋಮು, ಪಂಥಗಳಿಗೆ ಅಥವಾ ಸಾರ್ವಜನಿಕ ನೈಜಿಕತೆಗೆ ಬಾಧಕ ಉಂಟು ಮಾಡಬಹುದಾದಂತಹ ಚಟುವಟಿಕೆಯನ್ನು, ಸರ್ಕಾರಿ ಸಂಸ್ಥೆಗಳು, ಸಂಘಟನೆಗಳು ಹಾಗೂ ಕಾರ್ಯನಿರತ ಅಧಿಕಾರಿ, ಸಿಬ್ಬಂಧಿಗಳ ವಿರುದ್ಧ ನಿಂಧಿಸುವAತಹ ಯಾವುದೇ ಘೋಷಣೆ, ಅವಾಚ್ಯ ಶಬ್ಧಗಳ ಬಳಕೆ, ಪ್ರಚೋದನಾಕಾರಿ ಭಾಷಣ, ಗಾಯನ ಇತ್ಯಾದಿ ಚಟುವಟಿಕೆ, ಶಸ್ತ್ರ, ದೊಣ್ಣೆ, ಕತ್ತಿ, ಈಟಿ, ಬಂದೂಕು, ಚಾಕು, ಕೋಲು, ಲಾಠಿ ಅಥವಾ ದೈಹಿಕ ಹಿಂಸೆಯನ್ನುAಟು ಮಾಡುವ ಇತರ ವಸ್ತುಗಳ ಒಯ್ಯುವಿಕೆ, ಪಟಾಕಿ ಸಿಡಿಸುವುದು, ಸ್ಪೋಟಕಗಳನ್ನು ಒಯ್ಯುವುದು, ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ಸಾರ್ವಜನಿಕ ಹಾಗೂ ರಾಜಕೀಯ ಸಭೆ ಸಮಾರಂಭ ನಡೆಸುವುದು, ಸಾರ್ವಜನಿಕ ಸ್ಥಳದಲ್ಲಿ ಎಲ್.ಇ.ಡಿ ಬಳಸಿ ಪ್ರದರ್ಶನ ನಡೆಸುವುದು, ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡಬಹುದಾದ ಅಥವಾ ರಾಜ್ಯದ ಭದ್ರತೆಯನ್ನು ಕುಗ್ಗಿಸಬಹುದಾದ ಅಪರಾಧವನ್ನು ಮಾಡಲು ಪ್ರಚೋದಿಸಬಹುದಾದದ ಬಹಿರಂಗ ಘೋಷಣೆಗಳನ್ನು ಕೂಗುವುದು, ಆವೇಶಭರಿತ ಭಾಷಣ ಮಾಡುವುದು, ಭಿತ್ತಿ ಪತ್ರಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!