ಇಂದು ಕೊಂಕಣಿ ಭವನ ಶಿಲಾನ್ಯಾಸ

 ಇಂದು ಕೊಂಕಣಿ ಭವನ ಶಿಲಾನ್ಯಾಸ
Share this post

ಮಂಗಳೂರು,ಫೆ.25, 2022: ನಗರದ ಉರ್ವ ಸ್ಟೋರ್ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕೊಂಕಣಿ ಭವನದ ಶಿಲನ್ಯಾಸ ಸಮಾರಂಭವನ್ನು ಫೆ.26ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ನೆರವೇರಿಸುವರು.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ. ಕೆ. ಜಗದೀಶ್ ಪೈ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ, ಮಂಗಳೂರು ಮಹಾಪೌರರಾದ ಪ್ರೇಮಾನಂದ ಶೆಟ್ಟಿ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ್ ಕತ್ತಲ್‍ಸಾರ್, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ, ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಮಹಾನಗರ ಪಾಲಕೆ ಸದಸ್ಯರಾದ ಗಣೇಶ್ ಕುಲಾಲ್ ಹಾಗೂ ಇತರೆ ಗಣ್ಯರು ಹಾಗೂ ಜನಪ್ರತಿನಿಧಿಗಳು ಭಾಗವಹಿಸುವರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!