ಹಜ್ ಸಮಿತಿ ಅಧ್ಯಕ್ಷರ ಜಿಲ್ಲಾ ಪ್ರವಾಸ

 ಹಜ್ ಸಮಿತಿ ಅಧ್ಯಕ್ಷರ ಜಿಲ್ಲಾ ಪ್ರವಾಸ
Share this post

ಮಂಗಳೂರು,ಫೆ.25, 2022: ಕರ್ನಾಟಕ ರಾಜ್ಯ ಹಜ್ ಸಮಿತಿಯ ಅಧ್ಯಕ್ಷರಾದ ರೌಫುದ್ದೀನ್ ಕಚೇರಿ ವಾಲೆ ಅವರು ಫೆಬ್ರವರಿ 25ರಿಂದ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಅವರು ಫೆಬ್ರವರಿ 26ರ ಬೆಳಗ್ಗೆ 11 ಗಂಟೆಗೆ ಮಂಗಳೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಹಜ್ ಭವನಕ್ಕೆ ಸೂಕ್ತ ನಿವೇಶನವನ್ನು ಸಂಬಂಧಿಸಿದ ಇಲಾಖೆ, ಕಂದಾಯ ಇಲಾಖೆ, ಸರ್ಕಾರೇತರ ಸಂಸ್ಥೆಗಳು ಮತ್ತು ನಿವೇಶನಗಳ ಮಾಲೀಕರೊಂದಿಗೆ ಪರಿಶೀಲನೆ ನಡೆಸಿ, ಮಂಗಳೂರಿನಲ್ಲಿ ವಾಸ್ತವ್ಯ ಮಾಡುವರು.

ಫೆಬ್ರವರಿ 27ರ ಸೋಮವಾರ ಬೆಳಗ್ಗೆ 11 ಗಂಟೆಗೆ ಸರ್ಕಾರೇತರ ಸಂಸ್ಥೆಗಳ ಹಾಗೂ ಹಜ್ ಸ್ವಯಂಸೇವಕರೊಂದಿಗೆ ಸಭೆ ನಡೆಸಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡುವರು ಎಂದು ರಾಜ್ಯ ಹಜ್ ಸಮಿತಿಯ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!