ಚೀಫ್ ವಾರ್ಡ್‍ನ್ ಹುದ್ದೆಗೆ ಅರ್ಜಿ ಆಹ್ವಾನ


ಮಂಗಳೂರು,ಮಾ.03, 2022: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭವಾಗಿರುವ ಪೌರರಕ್ಷಣಾ ಪಡೆಯ ಮೇಲುಸ್ತುವಾರಿಗಾಗಿ ಚೀಫ್ ವಾರ್ಡನ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಪದವೀಧರರಾಗಿದ್ದು, ಯಾವುದೇ ರಾಜಕೀಯ ಪಕ್ಷದಲ್ಲಿರಬಾರದು, ಹಾಗೂ ಕ್ರಿಮಿನಲ್ ಮೊಕದ್ದಮೆಗಳು ಇರಬಾರದು ಮತ್ತು 50 ವರ್ಷ ಮೇಲ್ಪಟ್ಟಿರಬಾರದು. ಜಿಲ್ಲಾ ಕೇಂದ್ರದ 20 ಕಿಲೋಮೀಟರ್‍ನೊಳಗೆ ವಾಸವಿರಬೇಕು.
ಜಿಲ್ಲಾ ಸರ್ಜನ್‍ರಿಂದ ದೈಹಿಕವಾಗಿ ಸದೃಢತೆಯ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು. ಮಿಲಿಟರಿ, ಪ್ಯಾರಾ ಮಿಲಿಟರಿ, ಪೊಲೀಸ್ ಇಲಾಖೆಯಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿದ, ಶೌರ್ಯ ಪ್ರಶಸ್ತಿಯನ್ನು ಪಡೆದಂತಹ ಹಾಗೂ ಎನ್.ಸಿ.ಸಿ. ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ಇದೆ.
ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಇದೇ ಮಾ.31ರಂದು ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.