ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಮುಂದುವರಿಕೆ
ಉಡುಪಿ, ಮಾ 10, 2022: ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರಿಸಲಾಗಿದೆ.
ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಮಾ. 14 ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 24 ರ ಸಂಜೆ 6 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಪ್ರೌಢಶಾಲೆ, ಪದವಿ ಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ಸುತ್ತಮುತ್ತಲು 200 ಮೀ. ಪ್ರದೇಶವನ್ನು ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.