ಸರ್ಕಾರಿ ಜಮೀನು ಒತ್ತುವರಿಯಾಗಿದ್ದಲ್ಲಿ ದೂರು ನೀಡಿ: ತಹಶೀಲ್ದಾರ್
ಕಾರವಾರ ಮಾ. 18: ಸರ್ಕಾರಿ ಜಮೀನು ಒತ್ತುವರಿಯಾಗಿದ್ದಲ್ಲಿ ದೂರು ನೀಡಬೇಕೆಂದು ತಹಶೀಲ್ದಾರ್ ಎನ್.ಎಫ್.ನೋರೊನ ಸಾರ್ವಜನಿಕರಿಗೆ ಸೂಚಿಸಿದ್ದಾರೆ.
ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಮಠೇ, ಹಳ್ಳ, ಸರೋವರ ಮತ್ತು ಇನ್ನಿತರೆ ಜಲಕಾಶ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳನ್ನು ಗ್ರಾಮ ನಕಾಶೆಯಲ್ಲಿ ರಸ್ರೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲಾ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿ ಅಥವಾ ತಹಶೀಲ್ದಾರ ರವರರಿಗೆ ದೂರು ನೀಡಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.