ರೆಡ್‌ಕ್ರಾಸ್ ವತಿಯಿಂದ ದಿನಸಿ ಕಿಟ್ ವಿತರಣೆ

 ರೆಡ್‌ಕ್ರಾಸ್ ವತಿಯಿಂದ ದಿನಸಿ ಕಿಟ್ ವಿತರಣೆ
Share this post

ಉಡುಪಿ, ಮಾರ್ಚ್ 24, 2022: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕ ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸಹಯೋಗದೊಂದಿಗೆ, ಇತ್ತೀಚೆಗೆ ನಗರದ ರೆಡ್ ಕ್ರಾಸ್ ಭವನದಲ್ಲಿ ಕರ್ನಾಟಕ ರಾಜ್ಯ ಶಾಖೆಯಿಂದ ನೀಡಲ್ಪಟ್ಟ ದಿನಸಿ ಕಿಟ್‌ಗಳನ್ನು ಅರ್ಹ ಬಡ ಫಲಾನುಭವಿಗಳಿಗೆ ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಮಾತನಾಡಿ, ರೆಡ್‌ಕ್ರಾಸ್ ಸಂಸ್ಥೆಯು ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಾ ಬಂದಿದ್ದು, ಇದರ ಮುಖ್ಯ ಉದ್ದೇಶ ವಿಕಲಚೇತನ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಬೇಕಾದ ಸಾಧನ ಸಲಕರಣೆಗಳನ್ನು ವಿತರಿಸುವುದರ ಜೊತೆಗೆ ಸರಕಾರದಿಂದ ಸಿಗುವ ಸೌಲಭ್ಯ ಮತ್ತು ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಡಿಯೋಲಜಿಸ್ಟ್, ಫಿಸಿಯೋಥೆರಪಿಸ್ಟ್, ಸೈಕ್ಯಾಟ್ರಿಕ್ ತಜ್ಙರ ಸೇವೆಯನ್ನು ಬಳಸಿಕೊಳ್ಳುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಲಯನ್ಸ್ ಜಿಲ್ಲಾ ಗವರ್ನರ್ ಎಮ್.ಜೆ.ಎಫ್ ಲಯನ್ ವಿಶ್ವನಾಥ ಶೆಟ್ಟಿ, ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಬಿ. ರತ್ನಾಕರ ಶೆಟ್ಟಿ, ಮಾಜಿ ಲಯನ್ಸ್ ಜಿಲ್ಲಾ ಗವರ್ನರ್ ಡಾ. ಮಧುಸೂದನ್ ಹೆಗ್ಡೆ, ಲಯನ್ ಶೋಭಾ ಎಂ. ಹೆಗ್ಡೆ, ಲಯನ್ ಪಾಂಡುರಂಗ ಆಚಾರ್ಯ, ಅಧ್ಯಕ್ಷ ಆನಂದ ಗಾಣಿಗ, ಕಾರ್ಯದರ್ಶಿ ವೀಣಾ, ಖಜಾಂಚಿ ಜಯಪ್ರಕಾಶ್ ಭಂಡಾರಿ, ರೆಡ್ ಕ್ರಾಸ್ ಮತ್ತು ಡಿ.ಡಿ.ಆರ್.ಸಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

 ಈ ಕಾರ್ಯಕ್ರಮದಲ್ಲಿ 12 ಫಲಾನುಭವಿಗಳಿಗೆ ದಿನಸಿ ಕಿಟ್ ವಿತರಿಸಲಾಯಿತು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!