ಮಂಗಳೂರು: ಬದಲಿ ಮಾರ್ಗದ ವ್ಯವಸ್ಥೆ

 ಮಂಗಳೂರು: ಬದಲಿ ಮಾರ್ಗದ ವ್ಯವಸ್ಥೆ
Share this post

ಮಂಗಳೂರು,ಮಾ.28, 2022: ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ರಿಂದ ಜೆಪ್ಪು ಮಹಾಕಾಳಿ ಪಡ್ಪು ರೈಲ್ವೆ ಕೆಳಸೇತುವೆ ಮುಖಾಂತರ ಮಾರ್ಗನ್ ಜಂಕ್ಷನ್ ವರೆಗೆ ಮಾ 28ರಿಂದ ಮೇ 11ರವರೆಗೆ 45 ದಿನಗಳ ಕಾಲ  ಅಭಿವೃದ್ಧಿ ಕಾಮಗಾರಿ ನಡೆಯಲಿದೆ.

ಮೋಟಾರು ವಾಹನ ಕಾಯ್ದೆ 1988ರ ಕಾಲಂ 115ರಡಿ ಬದಲಿ ಮಾರ್ಗ ವ್ಯವಸ್ಥೆ ಮಾಡಲಾಗಿದೆ.

ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುವ ವೇಳೆ ರಾಷ್ಟ್ರೀಯ ಹೆದ್ದಾರಿ 66 ರಿಂದ ಮಹಾಕಾಳಿ ಪಡ್ಡು ರೈಲ್ವೆ ಕೆಳಸೇತುವೆ ಮುಖಾಂತರ ಮಾರ್ಗರೇಟ್ ಜಂಕ್ಷನ್ ವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಮಂಗಳೂರು ನಗರದ ಒಳಗಡೆಯಿಂದ ರಾಷ್ಟ್ರೀಯ ಹೆದ್ದಾರಿ 66ರ ಕಡೆಗೆ ಸಂಚರಿಸುವ ಎಲ್ಲಾ ವಾಹನಗಳು ವೆಲೆನ್ಸಿಯಾ ರಸ್ತೆ ಮೂಲಕ ಕಂಕನಾಡಿ ವೃತ್ತಕ್ಕೆ ಬಂದು ಅಲ್ಲಿಂದ ಬಲಕ್ಕೆ ತಿರುಗಿ ರಾಷ್ಟ್ರೀಯ ಹೆದ್ದಾರಿ 66ರ ಪ್ರವೇಶಿಸಿ ಮುಂದಕ್ಕೆ ಸಂಚರಿಸುವುದು.
ರಾಷ್ಟ್ರೀಯ ಹೆದ್ದಾರಿ 66 ರಿಂದ ಮಹಾಕಾಳಿಪಡ್ಪು ಮೂಲಕ ಮಂಗಳೂರು ನಗರಕ್ಕೆ ಬರುವ ಎಲ್ಲಾ ವಾಹನಗಳು ಮಹಾವೀರ ವೃತ್ತದಲ್ಲಿ ಎಡಕ್ಕೆ ತಿರುಗಿ ಹಳೇ ಕಂಕನಾಡಿ ರಸ್ತೆ ಮೂಲಕ ನಗರಕ್ಕೆ ಪ್ರವೇಶಿಸಿ ಮುಂದಕ್ಕೆ ಸಂಚರಿಸುವಂತೆ ಮಂಗಳೂರು ಪೆÇಲೀಸ್ ಆಯುಕ್ತರ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!