ಹಾಲು ಉತ್ಪಾದಕರಿಗಾಗಿ ಸಹಕಾರಿ ಬ್ಯಾಂಕ್ ಸ್ಥಾಪಿಸಿರುವ ಏಕೈಕ ರಾಜ್ಯ ಕರ್ನಾಟಕ:ಅಮಿತ್ ಷಾ

 ಹಾಲು ಉತ್ಪಾದಕರಿಗಾಗಿ ಸಹಕಾರಿ ಬ್ಯಾಂಕ್ ಸ್ಥಾಪಿಸಿರುವ ಏಕೈಕ ರಾಜ್ಯ ಕರ್ನಾಟಕ:ಅಮಿತ್ ಷಾ
Share this post

ಬೆಂಗಳೂರು, ಏ 01, 2022: ಹಾಲು ಉತ್ಪಾದಕರಿಗಾಗಿ ಮೀಸಲಿರುವ ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕನ್ನು ಸ್ಥಾಪಿಸಿರುವ ಏಕೈಕ ರಾಜ್ಯ ಕರ್ನಾಟಕ. ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಪ್ರಗತಿಪರ ಯೋಜನೆಗಳನ್ನು ಹಮ್ಮಿಕೊಂಡು ಅಭಿವೃದ್ಧಿಗೆ ಒತ್ತು ನೀಡುತ್ತಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್ ಷಾ ಮೆಚ್ಚುಗೆ ವ್ಯಕ್ತಪಡಿಸಿದರು.

ಅವರು ಇಂದು ಅರಮನೆ ಮೈದಾನದಲ್ಲಿ ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕಿನ ಲಾಂಛನ ಬಿಡುಗಡೆ ಮಾಡಿ ಮಾತನಾಡುತ್ತಿದ್ದರು.

ದೇಶದ ಸಫಲ ಸಹಕಾರಿ ಆಂದೋಲನಗಳ ಪೈಕಿ ಕರ್ನಾಟಕದ ಸಹಕಾರಿ ಆಂದೋಲನವೂ ಒಂದು. ಸಹಕಾರಿ ರಂಗದಲ್ಲಿ ಯಶ ಸಾಧಿಸಿರುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯ ‘ಎ’ ಶ್ರೇಣಿಯಲ್ಲಿದೆ. ಕರ್ನಾಟಕದ ಸಹಕಾರ ಆಂದೋಲನವನ್ನು ಸುವರ್ಣಾಕ್ಷರಗಳಲ್ಲಿ ಬರೆಯಲಾಗುತ್ತದೆ. ಕರ್ನಾಟಕ ರಾಜ್ಯದ ಸಹಕಾರಿ ಆಂದೋಲನ ಎಲ್ಲ ಗ್ರಾಮಗಳಿಗೂ ತಲುಪುವ ವಿಶ್ವಾಸವಿದೆ ಎಂದರು.

ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕ್ ಸ್ಥಾಪನೆಯ ಮೂಲಕ ಗ್ರಾಮೀಣಾಭಿವೃದ್ಧಿಯನ್ನು ಬಲಪಡಿಸುವ ಕೆಲಸವಾಗಿದೆ. ಹಾಲು ಉತ್ಪಾದಕರಿಗೆ ಕ್ರೆಡಿಟ್ ಕಾರ್ಡ್ ನೀಡುವ ಮೂಲಕ ರೈತರನ್ನು ಆತ್ಮನಿರ್ಭರರನ್ನಾಗಿ ಮಾಡಲಾಗುತ್ತಿದೆ. ಕರ್ನಾಟಕದ ಪ್ರತಿ ಗ್ರಾಮದಲ್ಲಿಯೂ ಸಹಕಾರಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು. ಸಹಕಾರಿ ಕ್ಷೇತ್ರದ ವಿಶ್ವಾಸಾರ್ಹತೆಯನ್ನು ಬೆಳೆಸುವ ಮೂಲಕ ಗ್ರಾಮೀಣಾಭಿವೃದ್ಧಿ ಕ್ಷೇತ್ರವನ್ನು ಬಲಪಡಿಸಲಾಗುವುದು ಎಂದರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!