ಏ.14 ರಂದು ಭಗವಾನ್ ಮಹಾವೀರ ಜಯಂತಿ
ಮಂಗಳೂರು,ಏ.11, 2022: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜೈನ ಸೊಸೈಟಿಯ ಸಂಯುಕ್ತಾಶ್ರಯದಲ್ಲಿ ಏ.14ರ ಗುರುವಾರ ಬೆಳಿಗ್ಗೆ 11.30ಕ್ಕೆ ನಗರದ ಬಜಿಲಕೇರಿಯಲ್ಲಿರುವ ಶ್ರೀ ಆದೀಶ್ವರ ಸ್ವಾಮಿ ಜೈನ ಬಸದಿಯಲ್ಲಿ ಭಗವಾನ್ ಮಹಾವೀರ ಜಯಂತಿಯನ್ನು ಆಚರಿಸಲಾಗುತ್ತಿದೆ.
ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಉಪಸ್ಥಿತಿ ವಹಿಸುವರು.
ಶಾಸಕರಾದ ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸುವರು. ಸಂಸದರಾದ ನಳಿನ್ ಕುಮಾರ್ ಕಟೀಲ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಯು.ಟಿ. ಖಾದರ್, ಡಾ. ವೈ ಭರತ್ ಶೆಟ್ಟಿ, ಹರೀಶ್ ಪೂಂಜಾ, ರಾಜೇಶ್ ನಾಯಕ್, ಸಂಜೀವ ಮಠಂದೂರು, ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್. ಭೋಜೇಗೌಡ, ಪ್ರತಾಪಸಿಂಹ ನಾಯಕ್, ಮಂಜುನಾಥ ಭಂಡಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ನ ಅಧ್ಯಕ್ಷ ಸಂತೋμï ರೈ ಬೋಳಿಯಾರ್, ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ, ಮಂಗಳೂರು ಮಹಾಪೌರರಾದ ಪ್ರೇಮಾನಂದ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜಗದೀಶ್ ಪೈ, ಅರೆಭಾಷಾ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೋಯ್ಲಸ್ ಡಿ’ಸೋಜ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಶ್ರೀನಾಥ್ ಆಗಮಿಸಲಿದ್ದು ಮೂಡಬಿದಿರೆಯ ಶ್ರೀ ಧವಲಾ ಕಾಲೇಜು ಪ್ರಾಂಶುಪಾಲ ಡಾ. ಸುದರ್ಶನ್ ಕುಮಾರ್ ಮಹಾವೀರ ಜಯಂತಿ ಸಂದೇಶ ನೀಡಲಿದ್ದಾರೆ.