ಸಚಿವ ಈಶರಪ್ಪ ವಜಾಗೊಳಿಸಲು ಎಸ್.ಡಿ.ಪಿ.ಐ ಆಗ್ರಹ

ಉಡುಪಿ, ಏ 12, 2022: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಈಶ್ವರಪ್ಪ ರನ್ನು ಸಂಪುಟದಿಂದ ಕೂಡಲೇ ವಜಾಗೊಳಿಸಬೇಕು ಹಾಗೂ ಕೊಲೆ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಇಂದು ಉಡುಪಿ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.