ಎಸ್.ಎಸ್.ಎಲ್.ಸಿ ವಿಜ್ಞಾನ ಪರೀಕ್ಷೆ: 389 ವಿದ್ಯಾರ್ಥಿಗಳು ಗೈರು
ಮಂಗಳೂರು,ಏ.12, 2022: ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯುತ್ತಿದ್ದು, ಏ.11ರ ಸೋಮವಾರ ವಿಜ್ಞಾನ ಪರೀಕ್ಷೆ ನಡೆಯಿತು.
ಮೂರು ಖಾಸಗಿ ಕೇಂದ್ರಗಳು ಸೇರಿದಂತೆ ಜಿಲ್ಲೆಯ ಏಳು ತಾಲೂಕುಗಳಲ್ಲಿ ನಡೆಯುತ್ತಿರುವ ಪರೀಕ್ಷೆಯಲ್ಲಿ ಒಟ್ಟಾರೆ 29,593 ವಿದ್ಯಾರ್ಥಿಗಳ ಪೈಕಿ 29,204 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಅವರ ಪೈಕಿ 389 ಮಂದಿ ಗೈರಾಗಿದ್ದಾರೆ.
ಯಾವುದೇ ಡಿಬಾರ್ ಪ್ರಕರಣ ವರದಿಯಾಗಿಲ್ಲ, 18 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.