ಅರೆಕಾಲಿಕ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

 ಅರೆಕಾಲಿಕ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ
Share this post

ಮಂಗಳೂರು,ಏ.18, 2022: ಮಂಗಳೂರಿನ ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ ನೇರವಾಗಿ ಡಿಪ್ಲೋಮ ದ್ವಿತೀಯ ವರ್ಷಕ್ಕೆ ಲ್ಯಾಟರಲ್ ಎಂಟ್ರಿ ಮುಖಾಂತರ ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಅರೆಕಾಲಿಕ (ಪಾರ್ಟ್-ಟೈಮ್) ಕೋರ್ಸುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಐ.ಟಿ.ಐ ಉತ್ತೀರ್ಣರಾಗಿರುವವರು ಅಥವಾ ವಿಜ್ಞಾನ/ತಾಂತ್ರಿಕ ವಿಷಯದಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವ ಮಂಗಳೂರು ಮಹಾನಗರ ಪಾಲಿಕೆ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕು, ಬಂಟ್ವಾಳ ತಾಲ್ಲೂಕು ಹಾಗೂ ಉಡುಪಿ ಜಿಲ್ಲೆಯ ಉಡುಪಿ ತಾಲ್ಲೂಕುಗಳಲ್ಲಿನ ಯಾವುದೇ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಾರ್ಖಾನೆ, ಕೈಗಾರಿಕೆ, ಸಂಸ್ಥೆಗಳಲ್ಲಿ ಎರಡು ವರ್ಷಗಳ ಸೇವಾನುಭವ ಹೊಂದಿರುವ ರಾಜ್ಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಏ.20 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.

ಸೂಕ್ತ ದಾಖಲೆಗಳೊಂದಿಗೆ ನೇರವಾಗಿ ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0824-2211636 ಯನ್ನು ಸಂಪರ್ಕಿಸಬಹುದಾಗಿದೆ.

ಪ್ರವೇಶ ಅಧಿಸೂಚನೆ ಮತ್ತು ಅರ್ಜಿ ನಮೂನೆಯನ್ನು https://dtek.karnataka.gov.in ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್‍ನ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!