ಪಿ.ಯು.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

 ಪಿ.ಯು.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ
Share this post

ಕಾರವಾರ ಏ. 19, 2022: ಕರ್ನಾಟಕ ರಾಜ್ಯಾದ್ಯಂತ ಪಿ.ಯು.ಸಿ ಪರೀಕ್ಷೆಗಳನ್ನು ಏ. 22 ರಿಂದ ಮೇ 18 ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ತೆರಳಿ ಪರಿಕ್ಷೆಗ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!