ಏ.21 ರಂದು ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ
ಮಂಗಳೂರು,ಏ.19, 2022: ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯ ಪ್ರಯುಕ್ತ ಏ.21ರ ಗುರುವಾರ ಬೆಳಿಗ್ಗೆ 11.30ಕ್ಕೆ ನಗರದ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ 2021ನೇ ಹಾಗೂ 2022ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲಾಗುವುದು.
ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಉಪಸ್ಥಿತಿ ವಹಿಸುವರು.
ಶಾಸಕರಾದ ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸುವರು.