ಕಸಾಪ: ಪರೀಕ್ಷೆಗಳ ಫಲಿತಾಂಶ ಪ್ರಕಟ

 ಕಸಾಪ: ಪರೀಕ್ಷೆಗಳ ಫಲಿತಾಂಶ ಪ್ರಕಟ
Share this post

ಕಾರವಾರ ಏ. 25, 2022: 2021-22 ನೇ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತು ನಡೆಸಿದ ಕನ್ನಡ ಪ್ರವೇಶ, ಕಾವ, ಜಾಣ, ಮತ್ತು ರತ್ನ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ರಾಜ್ಯದ ಎಲ್ಲಾ ಪರೀಕ್ಷೆ ಕೇಂದ್ರಗಳಿಗೆ ಫಲಿತಾಂಶದ ಪಟ್ಟಿಯನ್ನು ಕಳುಹಿಸಲಾಗಿದೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಆನಲೈನ್ ವೆಬ್‍ಸೈಟ್ www.kasapa.in ನಲ್ಲಿ ಪ್ರಕಟಿಸಲಾಗಿದೆ.

ಅಂಕಪಟ್ಟಿ ಹಾಗೂ ಪ್ರಮಾಣಪತ್ರಗಳನ್ನು ಶೀಘ್ರದಲ್ಲಿಯೇ ಎಲ್ಲ ಅಭ್ಯರ್ಥಿಗಳಿಗೆ ತಲುಪಿಸಲಾಗುವುದು. ಹಾಗೂ ಮರುಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಅಂಕಪಟ್ಟಿ ಕಳುಹಿಸಲು ಇಚ್ಚಿಸುವ ಅಭ್ಯರ್ಥಿಗಳು ಕಳುಹಿಸಿದ ದಿನಾಂಕದಿಂದ 1 ತಿಂಗಳೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 26623584 ಗೆ ಸಂಪರ್ಕಿಸಿ ಎಂದು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ರಾಮಲಿಂಗಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!