ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯ

 ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯ
Share this post

ಉಡುಪಿ, ಏ 27, 2022: ಪ್ರಸ್ತುತ ಕೋವಿಡ್ ಪ್ರಕರಣಗಳ ಸಂಖ್ಯೆಯು ದೆಹಲಿ, ಹರಿಯಾಣ ಹಾಗೂ ಪಕ್ಕದ ತಮಿಳುನಾಡು ರಾಜ್ಯಗಳಲ್ಲಿ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿಯೂ ಸಹ ದೈನಂದಿನ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರಕರಣಗಳ ಸಂಖ್ಯೆಗಳನ್ನು ಕಡಿಮೆಗೊಳಿಸುವುದು ಹಾಗೂ ಕೋವಿಡ್ ವೈರಾಣುವಿನ ಸಂಖ್ಯೆ ನಿಯಂತ್ರಿಸಲು ಹಾಗೂ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸುವುದು ಅವಶ್ಯಕವೆಂದು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸೂಚಿಸಿದೆ.    

ಆದ್ದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕ ಸ್ಥಳಗಳಲ್ಲಿ, ಕಾರ್ಯನಿರ್ವಹಿಸುವ ಸ್ಥಳಗಳಲ್ಲಿ ಹಾಗೂ ಸಂಚಾರದ ಸಮಯದಲ್ಲಿ ಮಾಸ್ಕ್ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ದಂಡನಾತ್ಮಕ ಶಿಕ್ಷಾರ್ಹ ಅಪರಾಧವಾಗಿದೆ. ಇದನ್ನು ಉಲ್ಲಂಘಿಸಿದ್ದಲ್ಲಿ ಅವರ ವಿರುದ್ಧ ಸೂಚಿತ ಕಾನೂನು ನಿಯಮ, ಸ್ಥಳೀಯ ಆಡಳಿದ ನಿಬಂಧನೆಗಳನುಸಾರ ಕ್ರಮ ಕೈಗೊಳ್ಳಲಾಗುವುದು.

ಸಾರ್ವಜನಿಕ ಸ್ಥಳಗಳಲ್ಲಿ ವ್ಯವಹರಿಸುವಾಗ ಕನಿಷ್ಠ ಎರಡು ಅಡಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!