ಮೇ.7 ರಂದು ಡಿ.ದೇವರಾಜ ಅರಸು ಭವನದ ನೂತನ ಕಟ್ಟಡ ಉದ್ಘಾಟನೆ
ಮಂಗಳೂರು,ಮೇ.06, 2022: ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪುತ್ತೂರು ತಾಲೂಕು ಪಂಚಾಯತ್‍ನ ಸಂಯುಕ್ತಾಶ್ರಯದಲ್ಲಿ ಮೇ.7ರ ಶನಿವಾರ ಮಧ್ಯಾಹ್ನ 2 ಗಂಟೆಗೆ ಪುತ್ತೂರು ತಾಲೂಕಿನ ಸಾಲ್ಮರದ ಎ.ಪಿ.ಎಂ.ಸಿ ರಸ್ತೆಯ ಶಿವಗಿರಿ ನಗರ ಕೊಟೇಚಾ ಹಾಲ್‍ನ ಬಳಿ ಡಿ. ದೇವರಾಜ ಅರಸು ಭವನದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಕಟ್ಟಡವನ್ನು ಉದ್ಘಾಟಿಸುವರು.
ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಉಪಸ್ಥಿತರಿರುವರು. ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸುವರು.
ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಂಸದರಾದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಶಾಸಕರಾದ ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್. ಬೋಜೆಗೌಡ, ಪ್ರತಾಪಸಿಂಹ ನಾಯಕ್ ಕೆ, ವಿ. ಮಂಜುನಾಥ ಭಂಡಾರಿ, ಕರ್ನಾಟಕ ವಿದ್ಯುನ್ಮಾನ ಅಭಿವೃಧ್ಧಿ ನಿಗಮದ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ಪುತ್ತೂರು ನಗರಸಭೆ ಅಧ್ಯಕ್ಷರಾದ ಕೆ. ಜೀವಂಧರ್ ಜೈನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.