ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ರದ್ದು
![ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ರದ್ದು](https://thecanarapost.com/wp-content/uploads/2021/03/pu-luong-nature-reserve-in-vietnam-4180208_640.jpg)
ಕಾರವಾರ ಮೇ.12, 2022: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಘೋಷಣೆಯಾದ ಪ್ರಯುಕ್ತ, ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಮೇ. 13 ರಂದು ಹೊನ್ನಾವರ ತಾಲೂಕಿನ ಮಾವಿನಕೋರ್ವಾ ಹೋಬಳಿಯಲ್ಲಿ ನಡೆಯಬೇಕಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ರದ್ದುಗೊಂಡಿರುತ್ತದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.