ಪರಿಶಿಷ್ಟ ವರ್ಗಕ್ಕೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಮಂಗಳೂರು,ಮೇ.19, 2022: ಪರಿಶಿಷ್ಟ ವರ್ಗಕ್ಕೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಾದ ಕೊಡಿಯಾಲ್ ಬೈಲ್ ನ ಶಾರದ ವಿದ್ಯಾಲಯ, ಪುಣ್ಯಕೋಟಿ ನಗರದ ಶಾರದಾ ಗಣಪತಿ ವಿದ್ಯಾಕೇಂದ್ರ, ಮಾಣಿಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ವಿಟ್ಲ ಜೆಸಿಸ್ ಆಂಗ್ಲ ಮಾಧ್ಯಮ ಶಾಲೆ, ಬಂಟ್ವಾಳದ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ವಾಣಿ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ಸೆಕ್ರೇಡ್ ಹಾಟ್ಸ್ ಶಾಲೆಗಳಲ್ಲಿ 6ನೇ ಅಥವಾ ನಂತರದ ತರಗತಿಗಳ ದಾಖಲಾತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜೂನ್.6ರೊಳಗೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ನಗರದ ಅಶೊಕ್‍ನಗರದಲ್ಲಿರುವ ಐ.ಟಿ.ಡಿ.ಪಿ ಕಚೇರಿಯ ಯೋಜನಾ ಸಮನ್ವಯಾಧಿಕಾರಿ ಅಥವಾ ದೂ.ಸಂ:0824-2451269 ಸಂಪರ್ಕಿಸುವಂತೆ ಸಮಗ್ರ ಗಿರಿಜನ ಅಭಿವೃದ್ದಿ ಯೋಜನೆಯ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.