ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

 ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ ಪ್ರವೇಶಕ್ಕೆ ಅರ್ಜಿ ಆಹ್ವಾನ
Share this post

ಮಂಗಳೂರು, ಮೇ 21, 2022: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯಡಿ  ಕಾರ್ಯನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ಕೆಮ್ಮಾಜೆಯ ಮೆನ್ನಬೆಟ್ಟಿವಿನಲ್ಲಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿಗೆ 2022-23ನೇ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.

ಪ್ರಥಮ ಪಿಯುಸಿ, ಪಿಸಿಎಂಬಿ ಹಾಗೂ ಪಿಸಿಎಂಸಿ ಸಂಯೋಜನೆಗಳಿಗೆ ತಲಾ 40 ವಿದ್ಯಾರ್ಥಿಗಳನ್ನು ಎಸ್.ಎಸ್.ಎಲ್.ಸಿ ಅಂಕ ಮತ್ತು ಸರ್ಕಾರದ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

2021-22ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ  ಯಾವುದೇ ಶುಲ್ಕವಿಲ್ಲದೆ ಊಟ, ವಸತಿ, ಸಮವಸ್ತ್ರ ಪಠ್ಯಪುಸ್ತಕ, ಇನ್ನಿತರ ಸಾಮಗ್ರಿಗಳು ಮತ್ತು ಸಿಇಟಿ ಹಾಗೂ ನೀಟ್ ಪರೀಕ್ಷೆಗಳ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು.

ಅಭ್ಯರ್ಥಿಯು ತನ್ನ ಎಸ್‍ಎಟಿಎಸ್ ಸಂಖ್ಯೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಸಂಬಂಧಿತ ಇತರೆ ದಾಖಲೆಗಳೊಂದಿಗೆ ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗೆ ಹತ್ತಿರದ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರಾಂಶುಪಾಲರನ್ನು ಅಥವಾ ಮೊ.ಸಂಖ್ಯೆ: 8431739087 ಮೂಲಕ ಸಂಪರ್ಕಿಸುವಂತೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಪಿಯು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!