ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಮಂಗಳೂರು,ಮೇ.24, 2022: 2021-22ನೇ ಸಾಲಿನಲ್ಲಿ 7ನೇ ತರಗತಿ ಮತ್ತು 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ಆದಿವಾಸಿ ಕೊರಗ ಸಮುದಾಯಕ್ಕೆ ಸೇರಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ನಿಗಧಿತ ನಮೂನೆಯ ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆ ಅಥವಾ ಆಯಾ ತಾಲೂಕು ಕಚೇರಿಗಳಿಂದ ಪಡೆದು ಶಾಲಾ ಮುಖ್ಯೋಪಾಧ್ಯಾಯರಿಂದ ಧೃಡೀಕರಿಸಿ, ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರದ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಿ, ಸಂಬಂಧಪಟ್ಟ ತಾಲೂಕುಗಳ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಜೂನ್ 30ರೊಳಗೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.