ಜೂ.12 ರಂದು ಕಾನೂನು ಅರಿವು ಕಾರ್ಯಕ್ರಮ
ಮಂಗಳೂರು,ಜೂ.11, 2022: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಂಗಳೂರು ವಕೀಲರ ಸಂಘ ಹಾಗೂ ಮಕ್ಕಳ ಸಹಾಯವಾಣಿ ಮತ್ತು ಸಂಬಂಧಿಸಿದ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜೂ.12ರ ಭಾನುವಾರ ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶೋಭ ಬಿ.ಜಿ. ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅಥಿತಿಗಳಾಗಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೋನವಣೆ ಋಷಿಕೇಶ್ ಭಗವಾನ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ. ಕೃಷ್ಣಮೂರ್ತಿ ಎಚ್.ಕೆ, ಸಹಾಯಕ ಕಾರ್ಮಿಕ ಆಯುಕ್ತ ಶಿವಕುಮಾರ್, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ನರಸಿಂಹ ಹೆಗ್ಡೆ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ರೆನ್ನಿ ಡಿ’ಸೋಜಾ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ. ಸುಧಾಕರ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಉಪನಿರ್ದೇಶಕ ಪಾಪ ಬೋವಿ, ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್ನ ನಿರ್ದೇಶಕಿ ಹಿಲ್ಡಾ ರಾಯಪ್ಪನ್, ಮಂಗಳೂರು ಉಪವಿಭಾಗ-1ರ ಕಾರ್ಮಿಕ ಅಧಿಕಾರಿ ಅಮರೇಂದ್ರ, ಮಂಗಳೂರು ಉಪವಿಭಾಗ-2ರ ಕಾರ್ಮಿಕ ಅಧಿಕಾರಿ ಕುಮಾರಿ ಕಾವೇರಿ ಟಿ., ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕ ಶ್ರೀನಿವಾಸ ಭಾಗವಹಿಸಲಿದ್ದಾರೆ.
ಅಂದು ಬೆಳಿಗ್ಗೆ 9.30ಕ್ಕೆ ಜಾಥಾವನ್ನು ಹಮ್ಮಿಕೊಂಡಿದ್ದು, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ನಗರದ ಉರ್ವಸ್ಟೋರ್ ವೃತ್ತದಲ್ಲಿ ಚಾಲನೆ ನೀಡುವರು. ಉರ್ವಾಸ್ಟೋರ್ ವೃತ್ತದಿಂದ ಜಾಥಾವು ಜಿಲ್ಲಾ ಪಂಚಾಯತ್ವರೆಗೆ ಸಾಗಲಿದೆ.