ನೇತ್ರ ತಪಾಸಣಾ ಶಿಬಿರ ಉದ್ಘಾಟಿಸಿದ ಶಾಸಕ ರಘುಪತಿ ಭಟ್

 ನೇತ್ರ ತಪಾಸಣಾ ಶಿಬಿರ ಉದ್ಘಾಟಿಸಿದ ಶಾಸಕ ರಘುಪತಿ ಭಟ್
Share this post

ಉಡುಪಿ, ಜೂ. 12, 2022: ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಕನ್ನಡಕ ವಿತರಣೆ, ಇ-ಶ್ರಮ್ ಕಾರ್ಡ್ ನೊಂದಣಿ ಅಭಿಯಾನವನ್ನು ಶಾಸಕ ರಘುಪತಿ ಭಟ್ ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ಆದಿಶಕ್ತಿ ವೀರಭದ್ರ ಬ್ರಹ್ಮಲಿಂಗ ದೇವಸ್ಥಾನದಲ್ಲಿ ಉದ್ಘಾಟಿಸಿದರು.

ಭಾರತೀಯ ಜನತಾ ಪಾರ್ಟಿ, ಉಡುಪಿ ನಗರ, ಕಲ್ಯಾಣಪುರ ಬಿಜೆಪಿ ಇವರ ಆಶ್ರಯದಲ್ಲಿ ಹಾಗೂ ಪ್ರಸಾದ್ ನೇತ್ರಾಲಯದ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಸಹಭಾಗಿತ್ವದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ 8 ವರ್ಷದ ಕೇಂದ್ರ ಸರಕಾರದ ಆಡಳಿತದ ಸಂಭ್ರಮಾಚರಣೆ ಸಂದರ್ಭದಲ್ಲಿ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮ ಅಂಗವಾಗಿ ಈ ಶಿಬಿರ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ದೇವಾಡಿಗ, ಉಪಾಧ್ಯಕ್ಷರಾದ ಉದಯ್ ಪೂಜಾರಿ, ಉಡುಪಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ರಾಜ್ಯ ಎಸ್.ಟಿ ಮೋರ್ಚಾದ ಕಾರ್ಯದರ್ಶಿಗಳಾದ ಉಮೇಶ್ ನಾಯ್ಕ್, ಕಲ್ಯಾಣಪುರ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸತೀಶ್ ನಾಯ್ಕ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ದಿನೇಶ್ ಅಮೀನ್, ಶ್ರೀ ಆದಿಶಕ್ತಿ ವೀರಭದ್ರ ಬ್ರಹ್ಮಲಿಂಗ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜ್ಯೋತಿಪ್ರಸಾದ್ ಶೆಟ್ಟಿಗಾರ್, ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕರಾದ ಡಾ. ನಾಡೋಜ ಕೃಷ್ಣಪ್ರಸಾದ್ ಕಲ್ಯಾಣಪುರ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!