ಮಂಗಳೂರು,ಜೂ.14, 2022: ಮಂಗಳೂರು ವಿಶ್ವವಿದ್ಯಾನಿಲಯದ 2022-23ನೇ ಸಾಲಿನ ಶೈಕ್ಷಣಿಕ ಮಂಡಳಿಯ ಸಾಮಾನ್ಯ ಸಭೆ ಜೂ.16ರ ಗುರುವಾರ ನಡೆಯಲಿದೆ.
ಅಂದು ಬೆಳಿಗ್ಗೆ 11 ಗಂಟೆಗೆ ಮಂಗಳ ಗಂಗೋತ್ರಿಯ ಆಡಳಿತ ಸೌಧದ ರಾಣಿ ಅಬ್ಬಕ್ಕ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಯಲಿದೆ ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.