ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮಂಗಳೂರು,ಜೂ.14, 2022: ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 2022-23ನೇ ಸಾಲಿಗೆ ಹೊಸ ವಿದ್ಯಾರ್ಥಿಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪರಿಶಿಷ್ಟ ಜಾತಿ ಹಾಗೂ ವರ್ಗದ ವಿದ್ಯಾರ್ಥಿಗಳು ವೆಬ್ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ವಿವರ
- ಕೊಡಿಯಾಲ್ ಬೈಲ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ
- ಮೂಡಬಿದ್ರೆಯ ಲಾಡಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ
- ಮಂಗಳೂರಿನ ಕದ್ರಿಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ
- ಬಜ್ಪೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ
ಹೆಚ್ಚಿನ ಮಾಹಿತಿಗೆ ಮೊ:9480843114 ಗೆ ಕರೆ ಮಾಡಬಹುದು.
ದಾಖಲಾತಿಗಳನ್ನು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಸಿಕ್ ಛೆಂಬರ್ಸ್, 3ನೇ ಮಹಡಿ, ಮಾರ್ಕೆಟ್ ರಸ್ತೆ, ಮಂಗಳೂರು,ಇಲ್ಲಿಗೆ ಸಲ್ಲಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಪ್ರಕಟಣೆ ತಿಳಿಸಿದ್ದಾರೆ.