ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ಸರ್ಕಾರಿ ಸವಲತ್ತು ಪಡೆಯಲು ಅರ್ಜಿ ಆಹ್ವಾನ
ಮಂಗಳೂರು,ಜೂ.16, 2022: 2022-23ನೇ ಸಾಲಿನಲ್ಲಿ ಸರ್ಕಾರದ ವಿವಿಧ ಯೋಜನೆಗಳ ಸಲವತ್ತು ಪಡೆಯಲು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಸಿಖ್ಖರು, ಬೌದ್ದ ಜನಾಂಗದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ಯೋಜನೆಯಡಿ ವ್ಯಾಪಾರ, ಸಣ್ಣ ಕೈಗಾರಿಕೆ ಮತ್ತು ಕೃಷಿ ಅವಲಂಭಿತ ಚಟುವಟಿಕೆ ಮುಂತಾದವುಗಳನ್ನು ಪ್ರಾರಂಭಿಸಲು ಸಾಲ ಮತ್ತು ಸಹಾಯಧನ ನೀಡಲಾಗುವುದು.
ಶ್ರಮಶಕ್ತಿ ಯೋಜನೆಯಡಿ ಸಮುದಾಯದ ಕುಲಕಸುಬುದಾರರಿಗೆ ತರಬೇತಿ ನೀಡಿ ಅವರು ತಮ್ಮ ಕಲಾತ್ಮಕ ಹಾಗೂ ತಾಂತ್ರಿಕ ಕೌಶಲ್ಯ ವೃದ್ದಿಸಿಕೊಂಡು ಅದೇ ಕಸುಬಿನಲ್ಲಿ ಮುಂದುವರೆಯಲು ಹಾಗೂ ಸಣ್ಣ ವ್ಯಾಪಾರ ಪ್ರಾರಂಭಿಸಲು ಶೇಕಡ 50ರಷ್ಟು ಸಹಾಯಧನ ನೀಡಲಾಗುವುದು.
ಪ್ಯಾಸೆಂಜರ್ ಆಟೋರಿಕ್ಷಾ, ಟ್ಯಾಕ್ಸಿ, ಗೂಡ್ಸ್ ವಾಹನ ಖರೀದಿ ಯೋಜನೆಯಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳ ಸಹಯೋಗದೊಂದಿಗೆ ಪ್ಯಾಸೆಂಜರ್ ಆಟೋರಿಕ್ಷಾ, ಟ್ಯಾಕ್ಸಿ, ಗೂಡ್ಸ್ ವಾಹನ ಖರೀದಿಸಲು ಶೇಕಡಾ 33ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹರು ವೆಬ್‍ಸೈಟ್ https://kmdconline.karnataka.gov.in ಮೂಲಕ ಅರ್ಜಿ ಸಲ್ಲಿಸುವಂತೆ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.