ಜೂ.18 ರಂದು ವಿದ್ಯುತ್ ವ್ಯತ್ಯಯ

 ಜೂ.18 ರಂದು ವಿದ್ಯುತ್ ವ್ಯತ್ಯಯ
Share this post

ಮಂಗಳೂರು,ಜೂ.16, 2022: 110/11 ಕೆ.ವಿ ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಬೆಳುವಾಯಿ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

ಪ್ರಯುಕ್ತ ಜೂ.18ರ ಬೆಳಿಗ್ಗೆ 10 ರಿಂದ ಸಂಜೆ 5.30ರ ತನಕ ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ, ಕಾಯರ್ ಕಟ್ಟೆ, ಆಜಾದ್ ನಗರ, ಕರಿಯನಂಗಡಿ, ಮಲೆಬೆಟ್ಟು, ಮಂಜನಕಟ್ಟೆ, ಕಾಯಿದೆ, ಕೆಸರ್ ಗದ್ದೆ, ಪೆಲಕುಂಜ, ಮೂಡಾಯಿಕಾಡು, ಬೆಳುವಾಯಿ ಚರ್ಚ್, ಇರ್ವತ್ತೂರು ಕ್ರಾಸ್, ಗುಂಡುಕಲ್ಲು, ಮೂಡುಮಾರ್ನಾಡು, ಕೆಲ್ಲಪುತ್ತಿಗೆ, ದರೆಗುಡ್ಡೆ, ಅರಸುಕಟ್ಟೆ, ಪಣಪಿಲ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಕುಲಶೇಖರ:
110/33/11 ಕೆ.ವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆ.ವಿ ನೀರುಮಾರ್ಗ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ.

ಆದ್ದರಿಂದ ಜೂ.18ರ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಮಾಣೂರು, ಬಿತ್ತುಪಾದೆ, ಮಲ್ಲೂರು, ಬದ್ರಿಯಾ ನಗರ, ನೀರುಮಾರ್ಗ, ಪಡು, ದೆಮ್ಮಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!