ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ
ಚಿಕ್ಕಮಗಳೂರು, ಜೂ. 17, 2022: 2022-23 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಆರಂಭವಾಗಿದ್ದು, ಸಮೀಕ್ಷೆಯಲ್ಲಿ ರೈತರು ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆ ವಿವರ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.
ರೈತರು ತಮ್ಮ ಮೊಬೈಲ್ನಲ್ಲಿ ಗೂಗಲ್ ಪ್ಲೇಸ್ಟೋರ್ನಿಂದ ಮುಂಗಾರು ರೈತರ ಬೆಳೆ ಸಮೀಕ್ಷೆ 2022-23 ಎಂಬ ಆಪ್ನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
ಆಪ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ: https://play.google.com/store/apps/details?id=com.csk.Khariffarmer22_23.cropsurvey
ನಂತರ ಆಧಾರ್ ಕಾರ್ಡ್ ಸ್ಕ್ಯಾನ್ ಮಾಡಿಕೊಂಡು ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸಿಕೊಳ್ಳಬೇಕು. ಮೊಬೈಲ್ನಲ್ಲಿ ಮೊದಲು ಮಾಸ್ಟರ್ ವಿವರಗಳನ್ನು ಡೌನ್ಲೋಡ್ ಮಾಡಿಕೊಳ್ಳಬೇಕು ನಂತರ ತಮ್ಮ ಜಮೀನಿನ ಸರ್ವೆ ನಂಬರ್ಗಳನ್ನು ಸೇರಿಸಿಕೊಂಡು ಜಮೀನಿನಲ್ಲಿ ತಾವು ಬೆಳೆದ ಪ್ರತಿ ಬೆಳೆಯ ವಿವರಗಳೊಂದಿಗೆ ಛಾಯಾಚಿತ್ರಗಳನ್ನು ತೆಗೆದು ಅಪ್ಲೋಡ್ ಮಾಡಬೇಕು.
ಈ ರೀತಿ ಸಂಗ್ರಹಿಸಲಾದ ಬೆಳೆ ಮಾಹಿತಿಯನ್ನು ಎನ್ಡಿಆರ್ಎಫ್ ಅಡಿಯಲ್ಲಿ ಪ್ರವಾಹ ಮತ್ತು ಬರಗಾಲ ಸಂದರ್ಭದಲ್ಲಿ ಬೆಳೆ ನಷ್ಟ ಸಂಭವಿಸಿದಲ್ಲಿ ಪರಿಹಾರ ವಿತರಿಸಲು ಕನಿಷ್ಠ ಬೆಂಬಲ ಬೆಲೆ, ಬೆಳೆ ವಿಮಾ ಯೋಜನೆಯ ಸೌಲಭ್ಯ ಒದಗಿಸಲು ಬಳಸಲಾಗುತ್ತದೆ. ರೈತರು ಈ ಯೋಜನೆಯ ಉಪಯೋಗ ಪಡೆದುಕೊಂಡು ತಮ್ಮ ಜಮೀನಲ್ಲಿ ಬೆಳೆದ ಬೆಳೆಯ ವಿವರಗಳನ್ನು ಸರ್ಕಾರ ನಿಗದಿಪಡಿಸಿದ ಸಮಯದೊಳಗೆ ಅಪ್ಲೋಡ್ ಮಾಡುವಂತೆ ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಕೃಷಿ, ಕಂದಾಯ, ರೇಷ್ಮೆ, ತೋಟಗಾರಿಕಾ ಇಲಾಖೆಯ ಅಧಿಕಾರಿಗಳನ್ನು ಸಂರ್ಕಿಸಬಹುದು ಎಂದು ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.