ವಸತಿ ಯೋಜನೆಗೆ ಅರ್ಜಿ ಆಹ್ವಾನ

 ವಸತಿ ಯೋಜನೆಗೆ ಅರ್ಜಿ ಆಹ್ವಾನ
Share this post

ಕಾರವಾರ ಜೂ.19, 2022: ಡಾ. ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆಯಡಿ 2021-22 ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ವಸತಿ ಯೋಜನೆಯಡಿ ಪರಿಶಿಷ್ಟ ಜಾತಿಯ 17, ಪರಿಶಿಷ್ಟ ಪಂಗಡದ 7 ಅಭ್ಯರ್ಥಿಗಳಿಗೆ ವಸತಿ ನಿರ್ಮಾಣ ಸವಲತ್ತು ನೀಡಬಹುದಾಗಿದ್ದು, ಆಸಕ್ತ ಅರ್ಜಿದಾರರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಬುಕ್, ಆಧಾರ ಕಾರ್ಡ್, ಪಡಿತರ ಚೀಟಿ, ಪಹಣಿ ಪತ್ರಗಳ ಜೊತೆಗೆ ನಿಗದಿತ ನಮೂನೆಯಲ್ಲಿ 07 ದಿನಗಳೊಳಗಾಗಿ ನಗರಸಭೆ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಅವಧಿ ಮೀರಿದ, ದಾಖಲೆ ಸರಿಯಿಲ್ಲದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಕಾರವಾರ ನಗರಸಭೆ ಕಾರ್ಯಾಲಯ ಅಥವಾ ದೂರವಾಣಿ ಸಂಖ್ಯೆ 08382-227900 ಗೆ ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!