ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ: ಅರ್ಜಿ ಆಹ್ವಾನ
ಮಂಗಳೂರು,ಜೂ.22, 2022: 2022-23ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ(ಡಿ.ಹೆಚ್.ಟಿ.ಟಿ) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು, ವ್ಯಾಸಂಗದ ಸಮಯದಲ್ಲಿ ಪ್ರತಿ ತಿಂಗಳು 2,500ರೂ. ಶಿಷ್ಯವೇತನ ನೀಡಲಾಗುತ್ತದೆ. ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಮೂಲಕ ಕಲ್ಪಿಸಲಾಗುವುದು.
ತರಬೇತಿಗೆ ಲಭ್ಯವಿರುವ ಸಂಸ್ಥೆಗಳ ವಿವರ:
ಗದಗ-ಬೆಟಗೇರಿ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ-22, ಸೇಲಂ ತಮಿಳುನಾಡು ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ-17 ಅಭ್ಯರ್ಥಿಗಳು, ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ವೆಂಕಟಗಿರಿ ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ -03 ಅಭ್ಯರ್ಥಿಗಳು, ಕಣ್ಣೂರು ಕೇರಳ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ-02 ಅಭ್ಯರ್ಥಿಗಳು ಒಟ್ಟು 44 ಅಭ್ಯರ್ಥಿಗಳಿಗೆ ಅವಕಾಶವಿದೆ.
ವೆಬ್‍ಸೈಟ್ https://khtigadag.ac.in/AdmissionForm.pdf ಮೂಲಕ ಅರ್ಜಿ ಪಡೆದು ಸೂಕ್ತ ದಾಖಲಾತಿಯೊಂದಿಗೆ ಜುಲೈ 11ರೊಳಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ, ಬೆಟಗೇರಿ ಈ ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ:08372-297221, ಮೊ.ಸಂಖ್ಯೆ: 9449189170 ಅಥವಾ ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು, ಮೊ.ಸಂಖ್ಯೆ: 9481628584 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಅರ್ಜಿಗಾಗಿ ಇಲ್ಲಿ ಕ್ಲಿಕ್ ಮಾಡಿ: https://khtigadag.ac.in/AdmissionForm.pdf