ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

 ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ
Share this post

ಮಂಗಳೂರು,ಜೂ.22, 2022: ನಗರದ ಕದ್ರಿಹಿಲ್ಸ್ ನಲ್ಲಿರುವ ಕರ್ನಾಟಕ ಜರ್ಮನ್  ತಾಂತ್ರಿಕ ತರಬೇತಿ ಸಂಸ್ಥೆ(ಕೆ.ಜಿ.ಟಿ.ಟಿ.ಐ)ಯಲ್ಲಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳಿಗೆ ಉಚಿತವಾಗಿ ಅಲ್ಪಾವಧಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್ (ಸಿ.ಸಿ.ಎನ್.ಎ), ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಟೆಕ್ನಿಷಿಯನ್, ಟ್ಯಾಲಿ ಇ.ಆರ್.ಪಿ ಇತ್ಯಾದಿ ಒಂಬತ್ತು ಕೋರ್ಸ್‍ಗಳಿಗೆ ಉಚಿತ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು ಕೆ.ಜಿ.ಟಿ.ಟಿ.ಐ. ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ನೋಂದಾಯಿಸಬಹುದು.

ಹೆಚ್ಚಿನ ಮಾಹಿತಿಗೆ ಯೆಯ್ಯಾಡಿಯ ಶರ್ಬತ್‍ಕಟ್ಟೆ ಬಳಿ ಇರುವ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಎರಡನೇ ಮಹಡಿಯಲ್ಲಿರುವ ಕೆ.ಜಿ.ಟಿ.ಟಿ.ಐ. ಕಚೇರಿ ಅಥವಾ ದೂ.ಸಂಖ್ಯೆ: 0824-2211477, 8277741731 ಮೂಲಕ ಕರೆ ಮಾಡಬಹುದು ಎಂದು ಕೆ.ಜಿ.ಟಿ.ಟಿ.ಐ. ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!