ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಜನಪರ ಕಾರ್ಯಕ್ರಮ: ವೇದವ್ಯಾಸ್ ಕಾಮತ್

 ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಜನಪರ ಕಾರ್ಯಕ್ರಮ: ವೇದವ್ಯಾಸ್ ಕಾಮತ್
Share this post

ಮಂಗಳೂರು,ಜೂ.22, 2022: ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ  ನಗರದ ಅಭಿವೃದ್ದಿ ಕಾಮಗಾರಿಗಳೊಂದಿಗೆ ಹಲವು ಜನಪರ ಕಾರ್ಯಕ್ರಮಗಳನ್ನು ಸಹ ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಹೇಳಿದರು.

ಅವರು ಬುಧವಾರ ನಗರದ ಲೇಡಿಹಿಲ್‍ನಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಆರಂಭಗೊಂಡು ಏಳು ವರ್ಷ ಕಳೆದಿರುವ ನೆನಪಿಗಾಗಿ ಹಮ್ಮಿಕೊಳ್ಳಲಾದ ಮನಮಹೋತ್ಸವ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಮಾತನಾಡಿದರು.

ಜಿಲ್ಲೆಯ ಅಭಿವೃದ್ಧಿಗಾಗಿ ಜಾರಿಗೊಂಡಿರುವ ಸ್ಮಾರ್ಟ್ ಸಿಟಿ ಯೋಜನೆ ಆರಂಭಗೊಂಡು ಏಳು ವರ್ಷ ಪೂರ್ಣಗೊಂಡಿದೆ,  ಈ ಸಂದರ್ಭದಲ್ಲಿ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ನಗರದ ಪರಿಸರಕ್ಕೆ ಪೂರಕವಾದ ಮನಮಹೋತ್ಸವ, ಸ್ವಚ್ಚತಾ ಅಭಿಯಾನಗಳನ್ನು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಬೀದಿ ನಾಟಕಗಳನ್ನು ಏಳು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ, ಆ ಮೂಲಕ ಸ್ಮಾರ್ಟ್ ಸಿಟಿ ಯೋಜನೆ ಕೇವಲ ಕಾಮಗಾರಿಗಳಿಗಷ್ಟೇ ಸೀಮಿತವಲ್ಲ ಎಂದು ಸಾರ್ವಜನಿಕರಿಗೆ ಮನವರಿಕೆ ಮಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ, ನಗರಗಳನ್ನು ಸಮಗ್ರವಾಗಿ ಅಭಿವೃದ್ಧಿ ಮಾಡುವ ದೃಷ್ಟಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಾದ ಸ್ಮಾರ್ಟ್ ಸಿಟಿ ಯೋಜನೆ ಜಾರಿಯಾಗಿ 7 ವರ್ಷ ಕಳೆದಿದೆ ಹಾಗೂ ಜಿಲ್ಲೆ ಅಭಿವೃದ್ಧಿಯಾಗುತ್ತಿರುವ ಪ್ರಯುಕ್ತ ಏಳು ಎಂಬ ಸಂಖ್ಯೆಯನ್ನು ಸಾಂಕೇತಿಕವಾಗಿಟ್ಟುಕೊಂಡು ದೇಶದಾದ್ಯಂತ ಸಂಭ್ರಮಾಚರಣೆ ನಡೆಸಲಾಗುತ್ತಿದೆ. ಮಹಾನಗರಪಾಲಿಕೆ ವತಿಯಿಂದ ಜೂ.19ರಿಂದ 25ರ ವರೆಗೆ ಜನಪರ ಕಾರ್ಯಕ್ರಮಗಳೊಂದಿಗೆ ಏಳು ತಂಡಗಳ, ಏಳು ಓವರ್‍ಗಳ ಪಂದ್ಯಾಟವನ್ನೂ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಉಪ ಮೇಯರ್ ಸುಮಂಗಲಾ ರಾವ್, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಮೂಡ ಅಧ್ಯಕ್ಷ ರವಿಶಂಕರ್ ಮಿಜಾರ್, ಸ್ಮಾರ್ಟ್ ಸಿಟಿ ನಿರ್ದೇಶಕ ಸುಧೀರ್ ಶೆಟ್ಟಿ, ಸ್ಮಾರ್ಟ್ ಸಿಟಿ ಅಧಿಕಾರಿಗಳಾದ ಲಿಂಗೇಗೌಡ, ಅರುಣ್ ಪ್ರಭಾ, ಚಂದ್ರಕಾಂತ್, ಮಹಾನಗರ ಪಾಲಿಕೆ ಸದಸ್ಯ ಗಣೇಶ್ ಕುಲಾಲ್ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!