ಬಂಟ್ವಾಳ: ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು,ಜೂ.24, 2022: ಬಂಟ್ವಾಳದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ವ್ಯಾಪ್ತಿಯ ಅಂಗನವಾಡಿ ಕೇಂದ್ರದಲ್ಲಿ ಖಾಲಿಯಿರುವ 3 ಕಾರ್ಯಕರ್ತೆಯರ ಹಾಗೂ 13 ಸಹಾಯಕಿಯರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವೆಬ್‍ಸೈಟ್ : www.anganwadirecruit.kar.nic.in ನಲ್ಲಿ ಜುಲೈ.21ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಕೈಕುಂಜೆ, ಬಿ.ಸಿ.ರೋಡ್, ಬಂಟ್ವಾಳ ಅಥವಾ ವೆಬ್‍ಸೈಟ್ www.anganwadirecruit.kar.nic.in ಅಥವಾ ದೂರವಾಣಿ: 08255-232465 ಅನ್ನು ಕಚೇರಿ ವೇಳೆಯಲ್ಲಿ ಸಂರ್ಪಕಿಸಬಹುದು ಎಂದು ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.