ಕರಂಬಳ್ಳಿ ದೇವಸ್ಥಾನದಲ್ಲಿ ಅರೋಗ್ಯ ತಪಾಸಣಾ ಶಿಬಿರ

 ಕರಂಬಳ್ಳಿ ದೇವಸ್ಥಾನದಲ್ಲಿ ಅರೋಗ್ಯ ತಪಾಸಣಾ ಶಿಬಿರ
Share this post

ಉಡುಪಿ, ಜು 03, 2022: ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ, ಪತಂಜಲಿ ಯೋಗ ಸಮಿತಿ ಉಡುಪಿ, ಕರಂಬಳ್ಳಿ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಸಹಭಾಗಿತ್ವದಲ್ಲಿ ಜುಲೈ 3ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಕರಂಬಳ್ಳಿ ದೇವಸ್ಥಾನದ ಶ್ರೀನಿವಾಸ ಸಭಾಭವನದಲ್ಲಿ ನಡೆಯಿತು.

ಕಸ್ತೂರ್ಬಾ ಆಸ್ಪತ್ರೆಯ ಕಮ್ಯೂನಿಟಿ ಮೆಡಿಸಿನ್ ವಿಭಾಗದ ಡಾಕ್ಟರ್ ಸಂಜಯ್ ಕಿಣಿ ಶಿಬಿರಕ್ಕೆ ಚಾಲನೆ ನೀಡಿದರು.

ಕೆ ವಿ ಬಿ ಸಮಿತಿಯ ಅಧ್ಯಕ್ಷ ಕೃಷ್ಣರಾಜ ಭಟ್, ಕಾರ್ಯದರ್ಶಿ ನಾಗರಾಜ ಭಟ್, ಪತಂಜಲಿ ಯೋಗ ಸಮಿತಿ ಉಡುಪಿ ಇದರ ಅಧ್ಯಕ್ಷ ರಾಘವೇಂದ್ರ ಭಟ್ , ಮಹಿಳಾ ಪತಂಜಲಿ ಸಮಿತಿಯ ಲೀಲಾ ಆರ್ ಅಮಿನ್ , ಪ್ರಧಾನ ಅರ್ಚಕ ದಿವಾಕರ ಐತಾಳ್ ಉಪಸ್ಥಿತರಿದ್ದರು.

200 ಕ್ಕೂ ಹೆಚ್ಚು ಜನರು ಶಿಬಿರದ ಪ್ರಯೋಜನ ಪಡೆದರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!