ಜು.16 ರಂದು ಪಂಜದಲ್ಲಿ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ

 ಜು.16 ರಂದು ಪಂಜದಲ್ಲಿ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ
Share this post

ಮಂಗಳೂರು,ಜು.14, 2022: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಜು.16 ರಂದು ಮುಲ್ಕಿ ತಾಲೂಕಿನ ಪಂಜ ಗ್ರಾಮದ ವಿಠೋಭ ಭಜನಾ ಮಂದಿರದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಈ ಹಿನ್ನಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಪ್ರತಿಯೊಂದು ಸರ್ವೇ ಮಾಡಿಸಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸ್ವೀಕರಿಸುವಂತೆ ಸೂಚಿಸಲಾಗಿದೆ. ಆದಾಗ್ಯೂ ಸಾರ್ವಜನಿಕರು ನೇರವಾಗಿ ತಮ್ಮ ಅಹವಾಲುಗಳನ್ನು ನೀಡಲು ಬಯಸಿದ್ದಲ್ಲೀ, ಪಂಜ ಗ್ರಾಮ ಪಂಚಾಯತ್‍ಗೆ ನೀಡಬಹುದಾಗಿದೆ.

ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಜತೆಯಲ್ಲಿದ್ದು, ಸಮಸ್ಯೆಗಳನ್ನು ಅದಷ್ಟು ಸ್ಥಳದಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಯಾವುದೇ ಸಮಸ್ಯೆ ಸ್ಥಳದಲ್ಲಿ ಬಗೆಹರೆಯದಲ್ಲಿ ಮುಂದಿನ ಸೂಕ್ತವಾದ ದಿನವನ್ನು ನಿರ್ಧರಿಸಿ ಅದೇ ಗ್ರಾಮದಲ್ಲಿಯೇ ಮತ್ತೊಮ್ಮೆ ಗ್ರಾಮ ವಾಸ್ತವ್ಯ ನಡೆಸಲು ನಿರ್ಧರಿಸಲಾಗುವುದು.

ಈ ಸಮಯದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲನೆ ಮಾಡುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!