ಜು.19 ರಿಂದ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ
ಮಂಗಳೂರು,ಜು.15, 2022: ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರಿಂದ ದೂರು ಪಡೆಯಲು ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜು.19ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಪ್ರವಾಸ ಕೈಗೊಂಡಿದ್ದಾರೆ.
ವಿವರ ಇಂತಿದೆ:
- ಜು.19ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡಬ ತಾಲೂಕಿನ ಕಡಬ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ
- ಜು.20ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ತಾಲೂಕು ಕಚೇರಿಯಲ್ಲಿ
- ಜು.21ರ ಗುರುವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಳ್ಳಾಲ ತಾಲೂಕಿನ ನಗರಸಭಾ ಸಭಾಂಗಣದಲ್ಲಿ
ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ. ಉಳಿದಂತೆ ಇತರೆ ದಿನಗಳಲ್ಲಿಯೂ ಕಚೇರಿ ವೇಳೆಯಲ್ಲಿ ಸಾರ್ವಜನಿಕರು ಅಹವಾಲು, ದೂರುಗಳನ್ನು ನೀಡಬಹುದು.
ಅರ್ಜಿದಾರರು ನಗರದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿಗೆ ಅಥವಾ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ವೀಧಿಯಲ್ಲಿರುವ ಬಹು ಮಹಡಿ ಕಟ್ಟಡದ ಲೋಕಾಯುಕ್ತ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ
- ಪೊಲೀಸ್ ಅಧೀಕ್ಷಕರ ಕಚೇರಿ ದೂ.ಸಂಖ್ಯೆ:0824-2950997, 9243456629
- ಪೊಲೀಸ್ ಉಪಾಧೀಕ್ಷಕರ-1 ಕಚೇರಿ ದೂ.ಸಂಖ್ಯೆ:0824-2453420, 9448635348
- ಪೊಲೀಸ್ ಉಪಾಧೀಕ್ಷಕರ-2 ಕಚೇರಿ ದೂ.ಸಂಖ್ಯೆ:0824-2453420, 7019967061
- ಪೊಲೀಸ್ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:0824-2427237, 9448461816
ಮೂಲಕ ಸಂಪರ್ಕಿಸುವಂತೆ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.