ಜು.19, ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ನಿಷೇಧ ಸಭೆ
ಉಡುಪಿ, ಜುಲೈ 18, 2022: ಸರಕಾರವು ಪರಿಸರಕ್ಕೆ ಹಾನಿಯುಂಟು ಮಾಡುವ ಸಿಂಗಲ್ ಯೂಸ್ ಪ್ಲಾಸ್ಟಿಕ್ ವಸ್ತುಗಳ ಬಳಕೆ, ಮಾರಾಟ, ಸಂಗ್ರಹಣೆ ಹಾಗೂ ಸಾಗಾಣಿಕೆ ಮಾಡದಂತೆ ಆದೇಶ ಹೊರಡಿಸಿದೆ.
ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ನಿಷೇಧ ಕುರಿತ ಸಭೆಯು ಜುಲೈ 19 ರಂದು ಮಧ್ಯಾಹ್ನ 3 ಗಂಟೆಗೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗಡಿ ಮಾಲೀಕರು ಸಭೆಯಲ್ಲಿ ಭಾಗವಹಿಸುವಂತೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.