ಇಂಧನ ಸಚಿವರ ಪ್ರವಾಸ ಕಾರ್ಯಕ್ರಮ
ಉಡುಪಿ, ಜುಲೈ 22, 2022: ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಜುಲೈ 23 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ 8.45 ಕ್ಕೆ ಕೆರೆಬೆಟ್ಟುವಿನಲ್ಲಿ ಶಿವಪುರ ಕೆರೆಬೆಟ್ಟು ಅಂಗನವಾಡಿ ಕಟ್ಟಡ ಉದ್ಘಾಟನೆ, 9.45 ಕ್ಕೆ ಹೆಬ್ರಿಯ ಎಸ್.ಆರ್ ವಿದ್ಯಾಸಂಸ್ಥೆಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ, 11.30 ಕ್ಕೆ ಕಾರ್ಕಳದ ವಿಕಾಸ ಜನಸೇವಾ ಕಚೇರಿಯಲ್ಲಿ ಕ್ಷೇತ್ರದ ವಿವಿಧ ಸಮುದಾಯ ಭವನ ಕಾಮಗಾರಿಗಳ ಚೆಕ್ ವಿತರಣೆ.
ಮಧ್ಯಾಹ್ನ 3 ಗಂಟೆಗೆ ಬಿ.ಜೆ.ಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ, ಸಂಜೆ 5 ಗಂಟೆಗೆ ಉಡುಪಿಯ ಬಿ.ಜೆ.ಪಿ ಕಚೇರಿಯಲ್ಲಿ ಜಿಲ್ಲಾ ಬಿ.ಜೆ.ಪಿ ಹಿಂದುಳಿದ ವರ್ಗಗಳ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ, ನಂತರ ಕಾರ್ಕಳದಲ್ಲಿ ವಾಸ್ತವ್ಯ ಮಾಡಲಿರುವರು.