ಕೈಗಾರಿಕಾ ಘಟಕ ಸ್ಥಾಪಿಸಲು ಅರ್ಜಿ ಆಹ್ವಾನ
ಮಂಗಳೂರು,ಜು.23, 2022: 2022-23ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಅತೀ ಸಣ್ಣ ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಬ್ಯಾಂಕಿನ ಮೂಲಕ ಸಾಲ ಹಾಗೂ ಶೇ.60ರಷ್ಟು, ಗರಿಷ್ಠ 5ಲಕ್ಷ ರೂ. ಸಹಾಯಧನ ನೀಡಲು ಅವಕಾಶವಿರುತ್ತದೆ.
ಅತಿ ಸಣ್ಣ ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಆಸಕ್ತಿಯುಳ್ಳ ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಲದೆ ಸಾಫ್ಟ್ ಸೀಡ್ ಕ್ಯಾಪಿಟಲ್, ಸಾಲ ಶುಲ್ಕ ಮರುಪಾವತಿ, ವಿದ್ಯುಚ್ಚಕ್ತಿ ಸಹಾಯಧನ ಪಡೆಯಲು ಜಂಟಿ ನಿರ್ದೇಶಕರು ಜಿಲ್ಲಾ ಕೈಗಾರಿಕಾ ಕೇಂದ್ರ, ಮಂಗಳೂರು ಈ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ:0824-2214021 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.