ಕ್ಯಾಂಪಸ್ ಫ್ರಂಟ್ ಸದಸ್ಯತ್ವ ಅಭಿಯಾನಕ್ಕೆ ಮಂಗಳೂರು ನಗರದಲ್ಲಿ ಚಾಲನೆ
ಮಂಗಳೂರು ಜು 28, 2022: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ 2022-23 ನೇ ಸಾಲಿನ ಸದಸ್ಯತ್ವ ಅಭಿಯಾನವನ್ನು ಮಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಉಳ್ಳಾಲದ ಟಿಪ್ಪು ಸುಲ್ತಾನ್ ಪದವಿ ಪೂರ್ವ ಕಾಲೇಜು ಮುಂಭಾಗ ಚಾಲನೆ ನೀಡಲಾಯಿತು.
ಕ್ಯಾಂಪಸ್ ಫ್ರಂಟ್ ಮಂಗಳೂರು ನಗರಾಧ್ಯಕ್ಷ ಶರ್ಫುಧ್ಧೀನ್ ಬಜ್ಪೆ ವಿದ್ಯಾರ್ಥಿಗಳಿಗೆ ಸದಸ್ಯತ್ವ ಕೂಪನ್ ವಿತರಿಸುವ ಮೂಲಕ ಚಾಲನೆ ನೀಡಿದರು.
“ನಮ್ಮ ಶಿಕ್ಷಣ, ಹಕ್ಕು, ಪ್ರತಿರೋಧ” ಎಂಬ ಘೋಷವಾಕ್ಯದಡಿ ಈ ಬಾರಿಯ ಸದಸ್ಯತ್ವ ಅಭಿಯಾನ ನಡೆಯಲಿದ್ದು, ಜುಲೈ 25 ರಿಂದ ಆಗಸ್ಟ್ 30 ರವರೆಗೆ ಅಭಿಯಾನ ನಡೆಯಲಿದೆ. ಶೈಕ್ಷಣಿಕ ವಲಯಗಳಲ್ಲಿ ವಿದ್ಯಾರ್ಥಿಗಳು ಸಾಧನೆಗೈಯಲು ಅವರಿಗೆ ಬೇಕಾದ ಎಲ್ಲಾ ರೀತಿಯ ಪ್ರೋತ್ಸಾಹ ನೀಡುತ್ತಿದ್ದು ಅದರೊಂದಿಗೆ ವಿವಿಧ ಜಾಗೃತಿ ಕಾರ್ಯಕ್ರಮಗಳು, ದೇಶದ ಸಂವಿಧಾನಕ್ಕೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ರಾಜಿರಹಿತ ಹೋರಾಟ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳ ಮುಂದಿಡುವ ಆಶಯವಾಗಿದೆ. ಈ ನಿಟ್ಟಿನಲ್ಲಿ ಈ ಸದಸ್ಯತ್ವ ಅಭಿಯಾನ ನಡೆಸುತ್ತಿದ್ದೇವೆ,” ಎಂದು ಕ್ಯಾಂಪಸ್ ಫ್ರಂಟ್ ಮಂಗಳೂರು ನಗರಾಧ್ಯಕ್ಷ ಶರ್ಫುಧ್ಧೀನ್ ಬಜ್ಪೆ ತಿಳಿಸಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಮಂಗಳೂರು ನಗರ ಸಮಿತಿ ಸದಸ್ಯ ಫಹಾದ್, ಉಳ್ಲಾಲ ವಲಯಾಧ್ಯಕ್ಷ ಅರಫತ, ಕಾರ್ಯದರ್ಶಿ ತಫ್ಸಿರ್ ಹಾಗೂ ಅಫ್ತಾಬ್ ಉಪಸ್ಥಿತರಿದ್ದರು.