ಸೌಲಭ್ಯಗಳಿಗೆ ಅರ್ಜಿ ಆಹ್ವಾನ

 ಸೌಲಭ್ಯಗಳಿಗೆ ಅರ್ಜಿ ಆಹ್ವಾನ
Share this post

ಮಂಗಳೂರು,ಜು.30, 2022: 2022-23ನೇ ಸಾಲಿಗೆ ಕರ್ನಾಟಕ ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಪ್ರವರ್ಗ 3ಎ ನಲ್ಲಿರುವ 1(ಎ) ರಿಂದ 1(ಟಿ)ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ಸರ್ಪ ಒಕ್ಕಲಿಗ, ನಾಮದಾರಿ ಒಕ್ಕಲಿಗ, ಗಂಗಡ್‍ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮುರಸು ಒಕ್ಕಲಿಗ, ಗೌಡ ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮಾ, ರೆಡ್ಡಿ, ಗೌಡರ್, ನಾಮಧಾರಿ ಗೌಡ, ಉಪ್ಪಿನ ಕೊಳಗ, ಉತ್ತಮ ಕೊಳಗ ಸಮುದಾಯದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ಸಾಲ ಯೋಜನೆ, ನಿರುದ್ಯೋಗಿ ಯುವಕರಿಗೆ ಟೂರಿಸ್ಟ್ ಟ್ಯಾಕ್ಸಿ ಹಾಗೂ ಸರಕು ಸಾಗಾಣಿಕೆ ವಾಹನ ಖರೀದಿಗೆ ಸಹಾಯಧನ, ಗಂಗಾ ಕಲ್ಯಾಣ ಯೋಜನೆಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ವೆಬ್‍ಸೈಟ್: http://www.kaushalkar.com ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 18ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ದೂ.ಸಂ.0824-2456544 ಹಾಗೂ ವೆಬ್‍ಸೈಟ್: https://kvcdc.karnataka.gov.in ಅಥವಾ ನಗರದ ಉರ್ವಾಸ್ಟೋರ್‍ನಲ್ಲಿರುವ ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮವನ್ನು  ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!