ಉಡುಪಿ : ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ

 ಉಡುಪಿ : ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ
Share this post

ಬ್ರಹ್ಮಾವರ, ಜು 30, 2022: ನಮ್ಮ ಸುತ್ತಮುತ್ತ ಮಾನವ ಕಳ್ಳ ಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. ದುರ್ಬಲ ಮಹಿಳೆಯರು, ಅಶಕ್ತರು ಇದಕ್ಕೆ ಹೆಚ್ಚು ಬಲಿಯಾಗುತ್ತಿದ್ದು, ಇದೊಂದು ಸುವ್ಯವಸ್ಥಿತ ರೀತಿಯಲ್ಲಿ ನಡೆಯುತ್ತಿದೆ. ಕಾನೂನು ವ್ಯವಸ್ಥೆಯೊಂದಿಗೆ ನಮ್ಮಲ್ಲಿ ಸಮನ್ವಯತೆ ಇದ್ದಲ್ಲಿ ಇಂತಹ ಅಪರಾಧಗಳನ್ನು ಕಡಿಮೆ ಮಾಡಬಹುದು ಎಂದು ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ನಟೇಶ್ ಆರ್ ಹೇಳಿದರು.

ಬ್ರಹ್ಮಾವರದ ಹಂದಾಡಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್‌ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,  ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು  ಹಂದಾಡಿ, ಚಾಂತಾರು, ವಾರಂಬಳ್ಳಿ ಗ್ರಾಮ ಪಂಚಾಯಿತಿಯ ಸಹಯೋಗದಲ್ಲಿ ನಡೆದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂತಹ ಕೃತ್ಯಗಳ ಬಗ್ಗೆ ನಮಗೆ ಅರಿವಿಗೆ ಬಂದಲ್ಲಿ ಪೊಲೀಸ್‌ ಇಲಾಖೆಗೆ  ಸುಳಿವನ್ನು ನೀಡುವ ಮೂಲಕ ನಮ್ಮ ಕರ್ತವ್ಯ ಪಾಲನೆ ಮಾಡಿದಲ್ಲಿ ಇಂತಹ ಕೃತ್ಯಗಳನ್ನು ಕಡಿಮೆ ಮಾಡಬಹುದು. ಹಕ್ಕು ಪ್ರತಿಪಾದನೆಗಿಂತ ಕರ್ತವ್ಯ ಪಾಲನೆ ಅತೀ ಮುಖ್ಯ ವಿದ್ಯಾರ್ಥಿ ದೆಸೆಯಿಂದಲೇ ಈ ಬಗ್ಗೆ ಅರಿವು ಮೂಡಿಸಿದಲ್ಲಿ ನಾವು ಇದನ್ನು ನಿರ್ಮೂಲನೆ ಮಾಡಬಹುದು ಎಂದು ಅವರು ಹೇಳಿದರು.

ಬ್ರಹ್ಮಾವರ ತಹಶೀಲ್ದಾರ್‌ ರಾಜಶೇಖರ ಮೂರ್ತಿ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್‌ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ದಿನಾಚರಣೆಯ ಬಗ್ಗೆ ಮಾಹಿತಿ ನೀಡಿದರು.

ಹಂದಾಡಿ ಗ್ರಾಮ ಪಂಚಾಯಿತಿಯ ಶೋಭಾ ಪೂಜಾರಿ, ವಾರಂಬಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗವೇಣಿ ಪಂಡರಿನಾಥ್‌, ಚಾಂತಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬೇಬಿ ಪೂಜಾರಿ, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರೊನಾಲ್ಡ್‌ ಬಿ ಫುಟಾರ್ಡೋ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ವೀಣಾ ವಿವೇಕಾನಂದ, ಬ್ರಹ್ಮಾವರ ಪೊಲೀಸ್‌ ಠಾಣೆಯ ಮುಕ್ತ ಬಾಯಿ, ಶಿಕ್ಷಣ ಇಲಾಖೆಯ ಪ್ರಕಾಶ್‌ ಬಿ.ಬಿ ಇದ್ದರು.

ಮಕ್ಕಳ ಅಭಿವೃದ್ಧಿ ಇಲಾಖೆಯ ಕುಮಾರ್‌ ನಾಯಕ್‌ ಸ್ವಾಗತಿಸಿದರು. ಪ್ರಭಾಕರ ಆಚಾರ್ ಕಾರ್ಯಕ್ರಮ ನಿರೂಪಿಸಿದರು.

ಇದಕ್ಕೂ ಮುನ್ನ ಮಾನವ ಸರಪಳಿ ರಚಿಸಿ ನೀಲಿ ಬೆಲೂನ್‌ ಹಾರಿಸುವ ಮೂಲಕ ದಿನಾಚರಣೆಗೆ ಚಾಲನೆ ನೀಡಲಾಯಿತು. 

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!