ಭಾರತೀಯ ಸೇನೆ, ಇತರೆ ಯೂನಿಫಾರ್ಮ್ ಸೇವೆಗಳಿಗೆ ಅರ್ಜಿ ಆಹ್ವಾನ

 ಭಾರತೀಯ ಸೇನೆ, ಇತರೆ ಯೂನಿಫಾರ್ಮ್ ಸೇವೆಗಳಿಗೆ ಅರ್ಜಿ ಆಹ್ವಾನ
Share this post

ಮಂಗಳೂರು,ಆ.10, 2022: ಭಾರತೀಯ ಸೇನೆ ಅಥವಾ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ನಾಲ್ಕು ತಿಂಗಳ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ವಸತಿಯೊಂದಿಗೆ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ ತೇರ್ಗಡೆಯಾದ ಆಸಕ್ತ ಅಭ್ಯರ್ಥಿಗಳು ವೆಬ್ ಸೈಟ್ :https://sw.kar.nic.in ಮೂಲಕ ಅರ್ಜಿ ನಮೂನೆಯನ್ನು ಪಡೆದು ಆ.15ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದಕ್ಷಿಣ ಕನ್ನಡ ಜಿಲ್ಲೆ ದೂ.ಸಂಖ್ಯೆ:0824-2451237, ಉಡುಪಿ ಜಿಲ್ಲೆ ದೂ.ಸಂಖ್ಯೆ:0820-2574892 ಮತ್ತು ಉತ್ತರ ಕನ್ನಡ ಜಿಲ್ಲೆ, ದೂ.ಸಂಖ್ಯೆ:08382226514 ಹಾಗೂ ಬೆಂಗಳೂರಿನ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ದೂ.ಸಂಖ್ಯೆ:080-22207784 ಅನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ನಮೂನೆ: https://sw.kar.nic.in/PDF2018/PETCTENDER/Application%20Form.pdf

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!